ಹೊಸದಿಲ್ಲಿ: ಸದನದಲ್ಲಿ ಜನರ ಧ್ವನಿ ಎತ್ತಲು ಪ್ರತಿಪಕ್ಷಗಳಿಗೆ ಅವಕಾಶ ಸಿಗುತ್ತದೆ ಎಂಬ ಆಶಯವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.
ಎರಡನೇ ಅವಧಿಗೆ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ರಾಹುಲ್ ‘ಸದನ ಉತ್ತಮವಾಗಿ ಕಾರ್ಯನಿರ್ವಹಿಸಬೇಕೆಂದು ಪ್ರತಿಪಕ್ಷಗಳು ಬಯಸುತ್ತವೆ ವಿಶ್ವಾಸದಿಂದ ನಡೆಯುವುದು ಬಹಳ ಮುಖ್ಯ ಎಂದರು
“ನಿಮ್ಮ ಯಶಸ್ವಿ ಚುನಾವಣೆಗಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ.ಇಡೀ ಇಂಡಿಯಾ ಮೈತ್ರಿಕೂಟದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ. ಈ ಸದನವು ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ಖಂಡಿತವಾಗಿ ಸರ್ಕಾರಕ್ಕೆ ರಾಜಕೀಯ ಶಕ್ತಿಯಿದೆ, ಆದರೆ ವಿರೋಧ ಪಕ್ಷಗಳು ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ”ಎಂದರು.
‘ಪ್ರತಿಪಕ್ಷಗಳು ನಿಮ್ಮ ಕೆಲಸದಲ್ಲಿ ನಿಮಗೆ ಸಹಾಯ ಮಾಡಲು ಬಯಸುತ್ತವೆ. ಸದನದಲ್ಲಿ ಮಾತನಾಡಲು ನೀವು ಅವಕಾಶ ನೀಡುತ್ತೀರಿ ಎಂಬ ವಿಶ್ವಾಸ ನನಗಿದೆ. ಕಳೆದ ಬಾರಿಗಿಂತ ಈ ಬಾರಿ ಪ್ರತಿಪಕ್ಷಗಳು ಭಾರತೀಯರ ಧ್ವನಿಯನ್ನು ಗಮನಾರ್ಹವಾಗಿ ಪ್ರತಿನಿಧಿಸುತ್ತವೆ ಸದನದಲ್ಲಿ ವಿರೋಧದ ಧ್ವನಿಯನ್ನು ಪ್ರತಿನಿಧಿಸಲು ಅವಕಾಶ ನೀಡುವುದು ಬಹಳ ಮುಖ್ಯ’ ಎಂದು ಒತ್ತಿ ಹೇಳಿದರು.
‘ಸದನವನ್ನು ಎಷ್ಟು ಸಮರ್ಥವಾಗಿ ನಡೆಸಲಾಗುತ್ತಿದೆ ಎಂಬುದು ಪ್ರಶ್ನೆಯಲ್ಲ, ಸದನದಲ್ಲಿ ಭಾರತದ ಧ್ವನಿಯನ್ನು ಎಷ್ಟರ ಮಟ್ಟಿಗೆ ಕೇಳಲು ಅನುಮತಿಸಲಾಗುತ್ತದೆ ಎಂಬುದು ಪ್ರಶ್ನೆಯಾಗಿದೆ. ವಿರೋಧದ ಧ್ವನಿಯನ್ನು ಅಡಗಿಸುವ ಮೂಲಕ ನೀವು ಸದನವನ್ನು ಸಮರ್ಥವಾಗಿ ನಡೆಸಬಹುದು ಎಂಬ ಕಲ್ಪನೆಯು ಪ್ರಜಾಸತ್ತಾತ್ಮಕವಲ್ಲದ ಕಲ್ಪನೆಯಾಗಿದೆ. ಪ್ರತಿಪಕ್ಷಗಳು ಈ ದೇಶದ ಸಂವಿಧಾನವನ್ನು ರಕ್ಷಿಸಬೇಕೆಂದು ಭಾರತದ ಜನರು ನಿರೀಕ್ಷಿಸುತ್ತಾರೆ ಎಂಬುದನ್ನು ಈ ಚುನಾವಣೆಯು ತೋರಿಸಿದೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಮೂಲಕ ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ಮಾಡುತ್ತೀರಿ ಎಂದು ನಮಗೆ ವಿಶ್ವಾಸವಿದೆ’ ಎಂದರು.