ಚಿಕ್ಕಮಗಳೂರು: ಇಂದಿನಿಂದ ದೇವಸ್ಥಾನಗಳಲ್ಲಿ ಪೂಜಾ ಕಾರ್ಯಗಳಿಗೆ ಅನುಮತಿ ನೀಡಿದ ಕಾರಣ ಸುಮಾರು ಮೂರು ತಿಂಗಳ ಬಳಿಕ ಭಕ್ತರ ಸಮ್ಮುಖದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿಗೆ ಪೂಜೆ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಇಂದು ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಪಾಡಿಕೊಂಡ ಭಕ್ತರು ಇಂದು ಬೆಳಗಿನ ಪೂಜೆಯಲ್ಲಿ ಪಾಲ್ಗೊಂಡರು.
ಇಂದಿನಿಂದ ದೇವಸ್ಥಾನದಲ್ಲಿ ಪೂಜಾ-ಕೈಂಕರ್ಯ ಆರಂಭವಾಗಲಿದ್ದು, ಭಕ್ತರಿಗೆ ದೇವಿ ದರ್ಶನ, ಮಂಗಳಾರತಿಗಷ್ಟೆ ಅವಕಾಶ ನೀಡಲಾಗಿದೆ. ಪ್ರಸಾದ ಸೇರಿ ಯಾವುದೇ ಸೇವೆಯ ಲಭ್ಯವಿರುವುದಿಲ್ಲ.
ಇದನ್ನೂ ಓದಿ:ಹೆಣ್ಣಿನ ಬಗ್ಗೆ ಹೇಗೆ ಮಾತಾಡಬೇಕು ಅಂತ ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು : ಸುಮಲತಾ
ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಶಿ ಮಾತನಾಡಿ, ಇಂದಿನಿಂದ ಭಕ್ತರಿಕೆ ದೇವಿಯ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗುತ್ತಿದ್ದು, ಪೂಜೆಯಲ್ಲಿ ಭಕ್ತರು ಭಾಗವಹಿಸಬಹುದು. ದೇವಿ ದರ್ಶನ, ಮಂಗಳಾರತಿಗಷ್ಟೇ ಅವಕಾಶ ನೀಡಲಾಗಿದೆ. ಭಕ್ತರು ಮಾಸ್ಕ್ ಧರಿಸಿ, ಸ್ಯಾನಿಟೈಸ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿ ದರ್ಶನ ಪಡೆಯಬೇಕು ಎಂದರು.
ಕ್ಷೇತ್ರಕ್ಕೆ ಬಂದ ಭಕ್ತರು ಬಂದು ಹಸಿವಿನಿಂದ ವಾಪಸ್ಸು ತೆರಳಬಾರದು, ಹಾಗಾಗಿ ಸರ್ಕಾರ ಅನ್ನದಾಸೋಹಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.