Advertisement

ಪಕ್ಷದ ನಾಯಕರ ನಿರ್ಲಕ್ಷ್ಯಕ್ಕೆ ಹೊರಟ್ಟಿ ಅಸಮಾಧಾನ

10:35 PM Oct 12, 2019 | Lakshmi GovindaRaju |

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡ ನಂತರ ಪಕ್ಷದ ನಾಯಕರು ನಮ್ಮ ಬಗ್ಗೆ ಸರಿಯಾದ ಕಾಳಜಿ ತೋರುತ್ತಿಲ್ಲ ಎಂದು ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡುತ್ತಿರುವ ಬಗ್ಗೆ ಕೆಲವು ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಸೋಮವಾರ ಮತ್ತೂಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸದ್ಯಕ್ಕೆ ಯಾರೂ ಪಕ್ಷ ಬಿಡುವ ಆಲೋಚನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತನೆ ಮುಂದುವರಿದರೆ ನಮ್ಮ ದಾರಿಯನ್ನು ನಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next