Advertisement

ಮುಂಡಗೋಡ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ

12:56 PM Jan 26, 2022 | Team Udayavani |

ಮುಂಡಗೋಡ: ತಾಲೂಕಿನ ಕೋಡಂಬಿ ಗ್ರಾಮದಲ್ಲಿ ಮಂಗಳವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು  ಉಲ್ಲಂಘಿಸಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.

Advertisement

ತಾಲೂಕಿನಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ.ಆದರೆ ಮಂಗಳವಾರ ಕೋಡಂಬಿ ಗ್ರಾಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಸರಕಾರ ನೈಟ್ ಕರ್ಫ್ಯೂ ಜಾರಿ ಮಾಡಿತು. ಅಲ್ಲದೆ ಸಭೆ, ಸಮಾರಂಭಗಳಲ್ಲಿ  ನಿಯಮಿತವಾಗಿ ಜನರು  ಸೇರಬೇಕು ಎಂದು ಕಟ್ಟುನಿಟ್ಟಾಗಿ ನಿಯಮ ಜಾರಿಗೆ ತಂದಿದೆ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಒಂದು ಕಡೆ ಸೇರದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಹೇಳಿದೆ. ಆದರೆ ಸರಕಾರದ ಕೋವಿಡ್ ನಿಯಮ ಮಾತ್ರ ಕೋಡಂಬಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿದ್ದ ಜನರಿಗೆ ಮಾತ್ರ ಅನ್ವಯಿಸಲಿಲ್ಲ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಜನರು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸೇರಿದ್ದರು. ಉತ್ತರಕನ್ನಡ, ಧಾರವಾಡ, ಹಾವೇರಿ, ಶಿವಮೊಗ್ಗ ಜಿಲ್ಲೆ ಹಾಗು ವಿವಿಧ ಭಾಗಗಳಿಂದ ಜನರು ಹೋರಿಗಳನ್ನು ಸ್ಪರ್ಧೆಗೆ ತಂದಿದ್ದರು. ಅವರ ಜೊತೆಗೆ ಸ್ಪರ್ಧೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನ ಸಮೂಹ ಸೇರಿರುವುದು ಕಂಡು ಬಂದಿತು. ಮಾಸ್ಕ್ ಹಾಗೂ ಸಾಮಾಜಿಕ ಅಂತರವು ಮಾತ್ರ ಎಲ್ಲಿಯೂ ಕಂಡು ಬರಲಿಲ್ಲ.

ಹೋರಿ ಬೆದರಿಸುವ ಕಾರ್ಯಕ್ರಮಕ್ಕೆ ನಾವು ಯಾವುದೆ ಪರವಾನಿಗೆ ನೀಡಿಲ್ಲ. ಇಷ್ಟೊಂದು ದೊಡ್ಡ ಪ್ರಮಾಣದ ಜನ ಸೇರಿರುವುದು ನಮ್ಮ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪಾಳಾ ಗ್ರಾಮ ಲೆಕ್ಕಾಧಿಕಾರಿ ಹಾಗೂ ಕೋಡಂಬಿ ಪಂಚಾಯತ ಪಿಡಿಒರ ಮೇಲೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದೇನೆ. ಅಲ್ಲದೆ, ಕಾರ್ಯಕ್ರಮವನ್ನು ಆಯೋಜಕರ ಮೇಲೆ ಪ್ರಕರಣ ದಾಖಲಿಸುತ್ತೇವೆ.- ಶ್ರೀಧರ ಮುಂದಲಮನೆ ತಹಶೀಲ್ದಾರ, ಮುಂಡಗೋಡ

ಮೂರು ದಿನಗಳ ಹಿಂದೆಯೆ ಹೊನ್ನಾವರ ತಾಲೂಕಿಗೆ ಬಂದೋಬಸ್ತಗೆ ಬಂದಿದ್ದೆನೆ. ಕೊಡಂಬಿ ಗ್ರಾಮದಲ್ಲಿ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಜನ ಸೇರಿರುವುದು ನನ್ನ ಗಮನಕ್ಕೆ ಬಂದಿಲ್ಲ ನಮ್ಮ ಸಿಬ್ಬಂದಿಗಳಿಗೆ ಈ ಬಗ್ಗೆ ಮಾಹಿತಿ ನೀಡುತ್ತೇನೆ. ಎಸ್.ಎಸ್ ಸಿಮಾನಿ ಸಿಪಿಐ ಮುಂಡಗೋಡ

Advertisement

Udayavani is now on Telegram. Click here to join our channel and stay updated with the latest news.

Next