Advertisement

ದಿನ ಭವಿಷ್ಯ; ಈ ರಾಶಿಯವರಿಗೆ ಸಾಂಸಾರಿಕ ಸುಖ ವೃದ್ಧಿ, ಅನುರಾಗ ಹೆಚ್ಚಳ; ದೀರ್ಘ‌ ಪ್ರಯಾಣ ಸಂಭವ

10:57 AM Sep 23, 2021 | Team Udayavani |

ಮೇಷ:ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

Advertisement

ವೃಷಭ:ಧೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕಟಕ: ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ: ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆ ಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

Advertisement

ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯ ಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.
ಕುಂಭ :ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರ ದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ :ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.
Advertisement

Udayavani is now on Telegram. Click here to join our channel and stay updated with the latest news.

Next