Advertisement

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

07:41 AM Sep 03, 2024 | Team Udayavani |

ಮೇಷ: ಹೊಸ ಜವಾಬ್ದಾರಿಗಳನ್ನು ಸವಾಲಿನಂತೆ ಸ್ವೀಕರಿಸಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ.

Advertisement

ವೃಷಭ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬುದು ನೆನಪಿರಲಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್‌ ವ್ಯವಹಾರಸ್ಥರಿಗೆ ಲಾಭ.

ಮಿಥುನ: ಉದ್ಯೋಗಸ್ಥರಿಗೆ ವಿನಯ, ವಿಧೇಯತೆಯಿಂದ ಸಮಾಧಾನ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನದ ಕಡೆಗೆ ಒಲವು.

ಕರ್ಕಾಟಕ: ಮಾತಿನಲ್ಲಿ ತೂಕವನ್ನು ಉಳಿಸಿಕೊಂಡರೆ ಗೌರವ. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ಪ್ರಸ್ತಾವ ಒಪ್ಪಲು ಹಿಂಜರಿಕೆ ಬೇಡ. ಪರಿಸರ ನೈರ್ಮಲ್ಯ ಕ್ರಮಗಳ ನೇತೃತ್ವ.

Advertisement

ಕನ್ಯಾ: ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ನೂತನ ವಾಹನ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಪ್ರೋತ್ಸಾಹದ ಪರಿಸ್ಥಿತಿ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ನಿವೇಶನ ಖರೀದಿ ಪ್ರಯತ್ನ ಯಶಸ್ವಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ಯೋದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ..

ಮಕರ: ಮಾತಿನಲ್ಲಿ ಮೃದುತ್ವ ಹಾಗೂ ಸೂಕ್ಷ್ಮತೆ ಇರಲಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.ಮಕ್ಕಳ ಕ್ಷೇಮ ಚಿಂತನೆ.

ಕುಂಭ: ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಟೈಲರಿಂಗ್‌ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.

ಮೀನ: ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.

Advertisement

Udayavani is now on Telegram. Click here to join our channel and stay updated with the latest news.