Advertisement

ರಾಶಿ ಫಲ; ಆರೋಗ್ಯ ಗಮನಿಸಿ, ದೂರದ ವ್ಯವಹಾರಗಳಲ್ಲಿ ಪ್ರಗತಿ

07:13 AM Dec 21, 2022 | Team Udayavani |

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸು ವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲ. ದಂಪತಿಗಳು ಅನ್ಯೋನ್ಯತೆಗೆ ಗಮನಿಸಿ.

Advertisement

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ. ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿರಲಿ. ಹೆಚ್ಚಿನ ನಿರೀಕ್ಷೆ ಸಲ್ಲದು.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಆಸ್ತಿ ವಿಚಾರದಲ್ಲಿ ತಲ್ಲೀನತೆ.

ಸಿಂಹ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

Advertisement

ಕನ್ಯಾ: ಸ್ವಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಹೆಚ್ಚಿನ ಸಂತೋಷ.

ತುಲಾ: ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾಧಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚು ಪರಿಶ್ರಮ ಅಗತ್ಯ.

ವೃಶ್ಚಿಕ: ಆರೋಗ್ಯ ವೃದ್ಧಿ. ಹೆಚ್ಚಿನ ಸ್ಥಾನಮಾನ ಗೌರವ. ಬಂಧುಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ ಪ್ರಾಪ್ತಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ‌ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ, ಭೂಮಿ, ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ.

ಮಕರ: ಮಕ್ಕಳಿಂದ ಹೆಚ್ಚಿದ ಸಂತೋಷ. ಬಹುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಅನಿರೀಕ್ಷಿತ ಧನಾಗಮ ಹಾಗೂ ಹೆಚ್ಚಿದ ಉಳಿತಾಯ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅವಕಾಶ. ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿದಾಯಕ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಸಹಕಾರ ಸಂಭವ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ.

Advertisement

Udayavani is now on Telegram. Click here to join our channel and stay updated with the latest news.

Next