Advertisement

ರಾಶಿ ಫಲ: ಧನ ವೃದ್ಧಿ, ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ

07:22 AM Feb 10, 2023 | Team Udayavani |

ಮೇಷ: ದೀರ್ಘ‌ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನ ಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿನ ತಲ್ಲೀನತೆ.

Advertisement

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ.

ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದಲ್ಲಿ ವೃದ್ಧಿ.

Advertisement

ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧು ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರು ಹಿರಿಯರಿಂದ ಬೆಂಬಲ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ.ದೂರದ ಮಿತ್ರರಿಂದ ಸಹಾಯ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಮಾಡದಿರಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮುಗªತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಅಧ್ಯಯನದಲ್ಲಿ ತಲ್ಲೀನತೆಯಿಂದ ಮಾನಸಿಕ ತೃಪ್ತಿ.

Advertisement

Udayavani is now on Telegram. Click here to join our channel and stay updated with the latest news.

Next