Advertisement

ರಾಶಿ ಫಲ: ಅವಿವಾಹಿತರಿಗೆ ಕಂಕಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ

07:29 AM Mar 26, 2023 | Team Udayavani |

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.

Advertisement

ವೃಷಭ: ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ದೇವತಾ ಕಾರ್ಯಗಳಿಗೆ ಧನ ವ್ಯಯ.

ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ, ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆಯ ಸುಖ. ಸಾಂಸಾರಿಕ ಸುಖ ತೃಪ್ತಿ.

ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ.

Advertisement

ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಪ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರು ಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ. ದಾಂಪತ್ಯ ಸುಖ ವೃದ್ಧಿ.

ಕುಂಭ: ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನ ಗೌರವ ವೃದ್ಧಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆಯಿರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ.

Advertisement

Udayavani is now on Telegram. Click here to join our channel and stay updated with the latest news.

Next