Advertisement

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

07:37 AM Oct 24, 2024 | Team Udayavani |

ಮೇಷ: ದಿನಕ್ಕೊಂದು ಹೊಸ ಜವಾಬ್ದಾರಿ ಬಂದರೂ ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರ ದಲ್ಲಿ ಯಶಸ್ಸು. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ. ಗೆಳೆಯನ ಕೆಲಸಕ್ಕೋಸ್ಕರ ಪ್ರಯಾಣ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಕಿರಿಕಿರಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವ್ಯವಹಾರ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ. ಕೇರಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಯೋಜನ.

ಮಿಥುನ: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪಿತ್ರಾರ್ಜಿತ ಕೃಷಿ ಭೂಮಿಯಲ್ಲಿ ಸಾಮಾನ್ಯ ಬೆಳೆ.

ಕರ್ಕಾಟಕ: ನಿಂದೆ – ಪ್ರಶಂಸೆಗಳಿಗೆ ಕಿವಿ ಗೊಡಬೇಡಿ. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಹಿನ್ನಡೆ. ಉದ್ಯಮಗಳಿಗೆ ಕಾನೂನು ತೊಂದರೆ. ಪಾಲುದಾರಿಕೆ ವ್ಯವಹಾರ ವಿಸ್ತರಣೆ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.

ಸಿಂಹ: ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಅರ್ಹರಿಗೆ ಸಹಾಯ ಮಾಡುವ ಅವಕಾಶ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ. ಅಪರಿಚಿತ ಕ್ಷೇತ್ರದಿಂದ ಪಾಲುದಾರಿಕೆ ಪ್ರಸ್ತಾವ.

Advertisement

ಕನ್ಯಾ: ಅಪರಿಚಿತ ವ್ಯಕ್ತಿಗಳಿಂದ ಆಪತ್ತಿನಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ. ಸೋದರಿಯ ಮನೆಯಲ್ಲಿ ಧಾರ್ಮಿಕ ಸಮಾರಂಭ.

ತುಲಾ: ಉದ್ಯೋಗದಲ್ಲಿ ಅನುಭವಸ್ಥರಿಗೆ ಪುರಸ್ಕಾರ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಧನು: ನಿವಾಸ ಬದಲಾವಣೆಯ ಪ್ರಯತ್ನ ಮುಂದುವರಿಕೆ. ಶಿಕ್ಷಿತರಿಗೆ ಒಳ್ಳೆಯ ಅವಕಾಶ ಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ಅಸಹಾಯಕ ರೋಗಿಯ ಚಿಕಿತ್ಸೆಗೆ ನೆರವು.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಹಿತಶತ್ರುಗಳ ಕುತಂತ್ರಕ್ಕೆ ಸೋಲು.

ಕುಂಭ: ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಸಣ್ಣ ಉಳಿತಾಯ ಏಜೆಂಟರ ವ್ಯವಹಾರ ವೃದ್ಧಿ.

ಮೀನ: ಉದ್ಯೋಗ ಸ್ಥಾನದಲ್ಲಿ ಸಹಜ ವಾತಾವರಣ. ವ್ಯವಹಾರ ಕ್ಷೇತ್ರದಲ್ಲಿ ಸ್ವಾಭಾವಿಕ ಪೈಪೋಟಿ . ಸರಕಾರಿ ಕಾರ್ಯಾಲಯಗಳಲ್ಲಿ ವಿಳಂಬಿತ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ ಆರಂಭ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

Advertisement

Udayavani is now on Telegram. Click here to join our channel and stay updated with the latest news.

Next