Advertisement

ರಾಶಿ ಫಲ: ಈ ರಾಶಿಯವವರ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ

07:43 AM Sep 16, 2022 | Team Udayavani |

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

Advertisement

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ. ಮಕ್ಕಳಿಂದ ಸಂತಸದ ವಾತಾವರಣ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರàಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

Advertisement

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ, ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆ ಇರಲಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮಸ್ವಾಸ್ಥ್ಯ ವೃದ್ಧಿ.

ಧನು: ಆರೋಗ್ಯದಲ್ಲಿ ಪ್ರಗತಿ. ಆರ್ಥಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗುವಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next