Advertisement

ರೈತರು ಕೃಷಿ ಇಲಾಖೆ ನಿಯಮ ಪಾಲಿಸಿ: ಪ್ರಸನ್ನಕುಮಾರ್‌

05:37 PM May 25, 2019 | Naveen |

ಹೊಸದುರ್ಗ: ಕೃಷಿ ಪರಿಕರಗಳ ಮಾರಾಟಗಾರರು ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚಿತ್ರದುರ್ಗತಾಲೂಕು ಸಹಾಯಕ ಕೃಷಿ ನಿರ್ದೇಶಕ (ಜಾರಿ ದಳ) ಡಾ| ಕೆ.ಸಿ. ಪ್ರಸನ್ನಕುಮಾರ್‌ ಎಚ್ಚರಿಸಿದರು.

Advertisement

ಪಟ್ಟಣದ ಕೃಷಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ 2019-20ನೇ ಸಾಲಿನ ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ಬಗ್ಗೆ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ನಾಲ್ಕು ವರ್ಷಗಳಿಂದ ಬರಗಾಲದಿಂದ ನೋವು ಅನುಭವಿಸಿದ್ದ ರೈತ ಸಮುದಾಯಕ್ಕೆ ಈ ವರ್ಷಉತ್ತಮ ಮಳೆಯಾಗುತ್ತದೆ ಎಂಬ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ರೈತರ ಬೇಡಿಕೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಫೆಡರೇಶನ್‌, ಖಾಸಗಿ, ಸರಕಾರಿ ಸಂಘಗಳ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುವುದು. ಕೃಷಿ ಇಲಾಖೆ ಹಾಗೂ ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ನಿಗದಿತ ಸಮಯದಲ್ಲಿ ವಿತರಿಸಬೇಕು. ಪ್ರತಿ ಮಳಿಗೆ ಮುಂಭಾಗದಲ್ಲಿ ಕೃಷಿ ಪರಿಕರಗಳ ದರ, ಸಹಾಯಧನ, ರೈತರ

ವಂತಿಗೆ ಇತ್ಯಾದಿ ಮಾಹಿತಿಯುಳ್ಳ ದರಪಟ್ಟಿಯ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕು. ಅವಧಿಯೊಳಗೆ ಪರವಾನಗಿ ನವೀಕರಣ ಮಾಡಿಸಿಕೊಳ್ಳಬೇಕು. ನಿಗದಿತ ಬೆಲೆ ಹಾಗೂ ಗುಣಮಟ್ಟದ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕು ಎಂದು ಸೂಚಿಸಿದರು.

ತಾಂತ್ರಿಕ ಅಧಿಕಾರಿ ವೆಂಕಟೇಶ್‌ ಮಾತನಾಡಿ, ಎಲ್ಲಾ ಕೃಷಿ ಪರಿಕರ ಮಾರಾಟಗಾರರು ಪಿಒಎಸ್‌ ಮಷಿನ್‌ ಮೂಲಕವೇ ರಸಗೊಬ್ಬರ ವಿತರಣೆ ಮಾಡಬೇಕು. ರಸಗೊಬ್ಬರ ಖರೀದಿಗೆ

Advertisement

ಆಧಾರ್‌ ಸಂಖ್ಯೆ ಮಾಹಿತಿ ನೀಡದ ರೈತರಿಗೆ ರಸಗೊಬ್ಬರ ಮಾರಾಟ ಮಾಡುವುದು ಕಾನೂನು ಬಾಹಿರ. ಈ ರೀತಿ ಮಾರಾಟ ಮಾಡುವ ಮಾರಾಟಗಾರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.

ಎಂ.ಸಿ.ಎಫ್‌ ಸಂಸ್ಥೆಯ ಪ್ರತಿನಿಧಿ ಹೇಮಂತ್‌ಕುಮಾರ್‌ ಉದ್ಘಾಟಿಸಿದರು. ಕೃಷಿ ಅಧಿಕಾರಿಗಳಾದ ಉಲತ್‌ಜೈಬಾ, ಪವಿತ್ರಾ, ಆತ್ಮ ಯೋಜನೆಯ ಸಿಬ್ಬಂದಿ ಹಾಗೂ ತಾಲೂಕಿನ ಕೃಷಿ ಪರಿಕರ ಮಾರಾಟಗಾರರು ಇದ್ದರು.

46 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ
ಹೊಸದುರ್ಗ ತಾಲೂಕಿನಲ್ಲಿ ಒಟ್ಟು 46,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ವರ್ಷದಲ್ಲಿ ಮುನ್ನ ಮುಂಗಾರು ಕ್ಷೀಣಿಸಿದ್ದು ಹೆಸರು ಹಾಗೂ ಎಳ್ಳು ಬೆಳೆಗಳ ಬಿತ್ತನೆ ಕುಂಠಿತವಾಗಿದೆ. ಮುಂದಿನ ಮಾಹೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು ಎಲ್ಲಾ ಪರಿಕರ ಮಾರಾಟಗಾರರು ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ರೈತರಿಗೆ ನಿಯಮಾನುಸಾರ ವಿತರಿಸಬೇಕು ಎಂದು ಶ್ರೀರಾಂಪುರ ಕೃಷಿ ಅಧಿಕಾರಿ ಸಿ.ಎಸ್‌. ಈಶ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next