Advertisement
ಪಟ್ಟಣದ ಶಿವಗಂಗಾ ಕಲ್ಯಾಣಮಂಟಪದಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಭಾನುವಾರ ನಡೆದ ಕನಕ ಪ್ರತಿಭಾ ಪುರಸ್ಕಾರ ಹಾಗೂ ಕನಕ ಕೃಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಎನ್.ಆರ್. ಪುರ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಚ್. ಲೋಹಿತ್‌ಕುಮಾರ್ ಮಾತನಾಡಿ, ಹಿಂದುಳಿದ ವರ್ಗಕ್ಕೆ ಸೇರಿದವನೆಂಬ ಕಾರಣಕ್ಕೆ ಕನಕದಾಸರಿಗೆ ಸಮಾಜದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದೇ ಇರುವುದು ವಿಷಾದನೀಯ. ಶ್ರೀಮಠದ ಮಾರ್ಗದರ್ಶನದಲ್ಲಿ ಮುನ್ನಡೆದರೆ ಸಮುದಾಯದ ಬೆಳವಣಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕನಕ ನೌಕರರ ಸಂಘದ ಅಧ್ಯಕ್ಷ ಎಂ. ಶಶಿಧರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ವಜ್ರಪ್ಪ, ತಾಲೂಕು ಕುರುಬರ ಸಂಘದ ಅಧ್ಯಕ್ಷ ನಾಗೇನಹಳ್ಳಿ ಮಂಜುನಾಥ್, ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಡಾ| ಎಂ.ಎಚ್. ಕೃಷ್ಣಮೂರ್ತಿ, ಕನಕ ಬ್ಯಾಂಕ್ ಉಪಾಧ್ಯಕ್ಷ ಡಾ| ಬಿ.ಎಚ್. ಹನುಮಂತಪ್ಪ, ತಾಪಂ ಸದಸ್ಯರಾದ ಕರಿಬಸಮ್ಮ, ದೇವರಾಜ್, ಬಾಗೂರು ಗ್ರಾಪಂ ಅಧ್ಯಕ್ಷ ಲೋಹಿತ್‌ಕುಮಾರ್, ಟಿಎಪಿಸಿಎಂಎಸ್ ನಿರ್ದೇಶಕ ಕಾರೇಹಳ್ಳಿ ಬಸವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ. ಮಹಂತಪ್ಪ, ಕೃಷಿ ಅಧಿಕಾರಿ ಈಶ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಓರಗಲ್ಲಪ್ಪ, ಗೊರವಿನಕಲ್ಲು ರಾಜಣ್ಣ, ಮಾಚೇನಹಳ್ಳಿ ರಾಮಕೃಷ್ಣ ಭಾಗವಹಿಸಿದ್ದರು.