Advertisement

ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ: ಗೂಳಿಹಟ್ಟಿ

04:49 PM Apr 29, 2020 | Naveen |

ಹೊಸದುರ್ಗ: ಲಾಕ್‌ಡೌನ್‌ನಿಂದಾಗಿ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗ ಸಿಗದೆ ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡಬೇಕು ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಸೂಚಿಸಿದರು.

Advertisement

ಪಟ್ಟಣದ ತಾಲೂಕು ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಎಫೆಕ್ಟ್ನಿಂದ ಜನರ ಬಳಿ ದುಡ್ಡಿಲ್ಲದಂತಾಗಿದೆ. ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಿದ್ದವರು ಸ್ವಗ್ರಾಮಗಳಿಗೆ ಮರಳಿದ್ದಾರೆ. ಹಾಗಾಗಿ ಸ್ಥಳೀಯ ಮಟ್ಟದಲ್ಲಿ ಜನರಿಗೆ ಹೆಚ್ಚೆಚ್ಚು ಕೆಲಸ ಆಗಬೇಕು. ಅವರವರ ಹೊಲ, ಜಮೀನುಗಳಲ್ಲಿಯೇ ಉದ್ಯೋಗ ನೀಡಬೇಕೆಂದರು. ತಾಲೂಕಿನ ಯಾವ ಭಾಗದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಯಾವ ಗ್ರಾಮದಲ್ಲಾದರೂ ಸಮಸ್ಯೆಇದ್ದರೆ ಪಟ್ಟಿ ಕೊಡಿ. ಶುದ್ದ ನೀರಿನ ಘಟಕಗಳು ದುರಸ್ತಿಯಲ್ಲಿವೆ ಎಂಬ ದೂರುಗಳಿವೆ. ಘಟಕಗಳನ್ನು ದುರಸ್ತಿಪಡಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆ ಎಇಇಗೆ ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯಇಲಾಖೆ ಎಇಇ ನಾಗರಾಜ್‌ ಮಾತನಾಡಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಯಾವ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ತಾಲೂಕಿನಲ್ಲಿ 30 ಶುದ್ಧ ನೀರಿನ ಘಟಕಗಳು ರಿಪೇರಿಯಾಗಬೇಕಿದೆ. ಲಾಕ್‌ಡೌನ್‌ ಅವಧಿ ಮುಗಿದ ತಕ್ಷಣ ದುರಸ್ತಿ ಮಾಡಿಸಲಾಗುವುದು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಜಲಜೀವನ್‌ ಮಿಷನ್‌ ಯೋಜನೆ ಜಾರಿಗೊಂಡಿದ್ದು, ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಗಳಿಗೆ ಪೈಪ್‌ಲೈನ್‌ ಮುಖಾಂತರ ನೀರು ಸರಬರಾಜು ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next