Advertisement

Hosanagar; ವಿಪರೀತ ಮಳೆ: ಕಾಲುಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

10:24 PM Jul 04, 2024 | Shreeram Nayak |

ಹೊಸನಗರ: ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

Advertisement

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿಹಾಕಿರುವುದು ಕಂಡು ಬಂದಿದೆ.

ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ.

ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದ್ದು ಹತ್ತಿರದ ಗುಡ್ಡದಿಂದ ಬಾರೀ ನೀರು ಸಂಕದ ಮೇಲೆ ಹರಿಯುತ್ತಿತ್ತು. ಸಂಕ ದಾಟುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next