Advertisement

Hosanagara: ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ: ಹೃದಯವಿದ್ರಾವಕ ಘಟನೆ

01:00 PM Aug 09, 2024 | Kavyashree |

ಹೊಸನಗರ: ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಆ.7ರ ಬುಧವಾರ ರಾತ್ರಿ ನಡೆದಿದೆ.

Advertisement

ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next