Advertisement

ಹೊಸನಗರ ತಾಲೂಕಿನಲ್ಲಿ 1611 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು

05:52 PM Jun 20, 2020 | Naveen |

ಹೊಸನಗರ: ತಾಲೂಕಿನಲ್ಲಿ ಒಟ್ಟು 1611 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ. ತಾಲೂಕಿನಲ್ಲಿ ಒಟ್ಟು ಐದು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಹಶೀಲ್ದಾರ್‌ ಎಸ್‌.ವಿ. ರಾಜೀವ್‌ ತಿಳಿಸಿದರು.

Advertisement

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ರಿಪ್ಪನ್‌ಪೇಟೆಯ ಮೇರಿ ಮಾತಾ, ಸರ್ಕಾರಿ ಪಪೂ ಕಾಲೇಜು, ಹೊಸನಗರದಲ್ಲಿ ಸರ್ಕಾರಿ ಪಪೂ ಕಾಲೇಜು, ಹೋಲಿ ರಿಡೀಮರ್‌ ಶಾಲೆ, ಅಮೃತದಲ್ಲಿನ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳಾಗಿರುತ್ತವೆ. ಜೂ. 25ರಿಂದ ಜು. 4ರ ವರೆಗೆ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೆ„ಸ್‌ ಕಡ್ಡಾಯವಾಗಿರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌, ವೃತ್ತ ನಿರೀಕ್ಷಕ ಗುರಣ್ಣ ಹೆಬ್ಟಾಳ್‌, ತಾಪಂ ಇಒ ಪ್ರವೀಣ್‌ಕುಮಾರ್‌, ಪಪಂ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ತಾಲೂಕು ವೈದ್ಯಾಧಿ ಕಾರಿ ಸುರೇಶ್‌ ನಾಯ್ಕ, ಕ್ಷೇತ್ರ ಸಮಾನ್ವಯಾಧಿಕಾರಿ ನಾಗರಾಜ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next