Advertisement

26ರಂದು ಮಹಿಳಾ ಸಾಹಿತ್ಯ ಸಮ್ಮೇಳನ

04:54 PM May 04, 2019 | Team Udayavani |

ಹೊಸನಗರ: ಜಿಲ್ಲಾ ಮಟ್ಟದ 3ನೇ ಮಹಿಳಾ ಸಾಹಿತ್ಯ ಸಮ್ಮೇಳನವು ತಾಲೂಕಿನ ಕಾರಣಗಿರಿ ಸಿದ್ಧಿವಿನಾಯಕ ಸಭಾಂಗಣದಲ್ಲಿ ಮೇ 26ರಂದು ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಬಿ. ಶಂಕರಪ್ಪ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿವಮೊಗ್ಗದ ಸಾಹಿತಿ ಸತ್ಯಭಾಮಾ ನಾಗರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಉಸ್ತುವಾರಿ ಮಹಿಳೆಯರೇ ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಮಹಿಳಾ ಬರಹಗಾರರು, ಸಾಹಿತ್ಯದಲ್ಲಿ ಕೃಷಿ ಮಾಡಿದವರನ್ನು ಕಸಾಪ ಗುರುತಿಸಿದೆ.

ಬಿದನೂರು ಅರಸರ ಕಾಲದಿಂದಲೂ ಮಹಿಳಾ ಸಾಹಿತಿಗಳಿಗೆ ಹೆಚ್ಚಿನ ಸ್ಥಾನ ಮಾನ ನೀಡಲಾಗಿತ್ತು ಎಂಬದು ಇತಿಹಾಸ ಪುಟದಿಂದ ತಿಳಿದುಬಂದಿದೆ ಎಂದರು. ಈ ಹಿಂದೆ ಸಾಹಿತ್ಯ ಸಮ್ಮೇಳನವನ್ನು ಶಿಕಾರಿಪುರ ಹಾಗೂ ಶಿವಮೊಗ್ಗ ತಾಲೂಕಿನಲ್ಲಿ ನಡೆಸಲಾಗಿತ್ತು. ಮಹಿಳಾ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಮಹಿಳಾ ಲೇಖಕರಿಗೆ, ಹೊಸ ಬರಹಗಾರ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದ ಕೀರ್ತಿ ಜಿಲ್ಲಾ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ. ನಮ್ಮ ಮಾದರಿಯಲ್ಲಿ ಕೆಲವು ಜಿಲ್ಲೆಗಳು ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿವೆ ಎಂದರು. ಕಾರ್ಯಾಧ್ಯಕ್ಷರಾಗಿ ಆಯ್ಕೆ: ಇದೇ ವೇಳೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿ ಮ.ಸ. ನಂಜುಂಡಸ್ವಾಮಿ ಅವರನ್ನು ನೇಮಕ ಮಾಡಲಾಯಿತು. ತಾಲೂಕು ಕಸಾಪ ಅಧ್ಯಕ್ಷ ಕೆ. ಇಲಿಯಾಸ್‌, ಕಾರ್ಯದರ್ಶಿ ಗಂಗಾಧರಯ್ಯ, ಜಿಲ್ಲಾ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳಾದ ಚಂದ್ರಕಲಾ, ಜಿ.ಎಂ. ನಾಗರಾಜ, ಹಿತಕರ ಜೈನ್‌, ಹನಿಯ ರವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next