Advertisement

ಹೊಸಂಗಡಿ: ಪೊಲೀಸರಿಂದ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ  

10:28 PM Apr 15, 2020 | Sriram |

ಸಿದ್ದಾಪುರ: ಲಾಕ್‌ ಡೌನ್‌ ನಿಮಿತ್ತ ಜಿಲ್ಲಾಡಳಿತದ ಕಟ್ಟುನಿಟ್ಟಿನ ಆದೇಶದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಗಡಿಭಾಗವಾದ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.

Advertisement

ಅಮಾಸೆಬೈಲು ಪೊಲೀಸ್‌ ಠಾಣೆಯ ಉಪನಿರೀಕ್ಷಕ ಅನಿಲ್‌ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಟ್ಟುನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪೊಲೀಸರೊಂದಿಗೆ ಆರೋಗ್ಯ ಇಲಾಖೆ ಜಿಲ್ಲೆಯಿಂದ ಹೊರ ಹೋಗುವ ಹಾಗೂ ಒಳ ಬರುವವರ ಸ್ಕ್ರೀನಿಂಗ್‌ ನಡೆಸುತ್ತಿದ್ದಾರೆ. ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಕಂದಾಯ, ಅರಣ್ಯ ಹಾಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next