ಹೊಸಪೇಟೆ: ಕಳೆದ ಎಂಟು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯ ಹಿನ್ನೆಲೆ ಮನೆ ಗೋಡೆ ಕುಸಿದು ಬಿದ್ದು ವೃದ್ದೆಯೊಬ್ಬರು ಸಾವನಪ್ಪಿದ ಘಟನೆ ಜು. 26ರ ಬುಧವಾರ ರಾತ್ರಿ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೋಗಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕೋಗಳಿ ಗ್ರಾಮದ ನಾಗಮ್ಮ (60) ಮೃತ ವೃದ್ದೆ.
ಬುಧವಾರ ರಾತ್ರಿ ಮನೆ ಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿತ್ತು.
ರಾತ್ರಿ 10.30ರ ಸುಮಾರಿಗೆ ಕಿಮ್ಸ್ ನಲ್ಲಿ ವೃದ್ದೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.