Advertisement

ಮಕ್ಕಳ ಕಳ್ಳರು ಬಂದಿದ್ದಾರೆ: ವಂದತಿಗೆ ಕಿವಿಗೊಡದಿರಿ ಎಸ್ಪಿ ಅರುಣ್

08:22 PM Sep 15, 2022 | Team Udayavani |

ಹೊಸಪೇಟೆ: ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ವದಂತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

Advertisement

ಈ ಕುರಿತು ಬೇರೆ ದೇಶಗಳ ವಿಡಿಯೋ ತುಣಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದ ಆತಂಕಗೊಂಡ ಸಾರ್ವಜನಿಕರು, ಅಮಾಯಕ ವ್ಯಕ್ತಿಗಳನ್ನು ಮಕ್ಕಳ ಕಳ್ಳರು ಎಂದು  ತಪ್ಪು ಗ್ರಹಿಸಿ, ಹಲ್ಲೆ ನಡೆಸಿರುವ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಯಾವುದೇ ಪ್ರದೇಶಗಳಲ್ಲಿ ಸಂಶಯಸ್ಪಾದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬೇಕು. ಈ ಸಂದರ್ಭದಲ್ಲಿ ಘಟನಾಸ್ಥಳಕ್ಕೆ ಪೊಲೀಸ್ ಆಗಮಿಸಿ, ಕೂಲಂಕುಶವಾಗಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ವದಂತಿಗಳನ್ನು ನಂಬಿ ವಿನಾಃಕಾರಣ ಅಮಾಯಕ ವ್ಯಕ್ತಿಗಳಿಗೆ ತಡೆಯೊಡ್ಡಿ ಹಲ್ಲೆ ಮಾಡಿದಲ್ಲಿ ಅತಂಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮಕ್ಕಳ ಕಳ್ಳತನ ಬಗ್ಗೆ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಡಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next