Advertisement
ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಆಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
Related Articles
Advertisement
ಹೊಸಪೇಟೆ: ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಳೆ ಸುರಿಯುತ್ತಿದೆ. ತುಂಗಭದ್ರಾ ನದಿಗೆ ಅತಿ ಹೆಚ್ಚು ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ಅಗತ್ಯ ಮುಂಜಾಗ್ರತ ಕ್ರಮಗಳನ್ನು ವಿಜಯನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದ್ದಾರೆ.
ತುಂಗ ಜಲಾಶಯದಿಂದ 59446 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ ಸೇರಿದಂತೆ ಕೆರೆ, ನದಿ ತೀರಕ್ಕೆ ಸಾರ್ವಜನಿಕರು ಹೋಗದಂತೆ ಜಾಗೃತೆ ವಹಿಸಲಾಗಿದೆ.
ಮೀನುಗಾರರು ನದಿಗೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯ ನಿರ್ವಹಣೆ. ವಿವಿಧ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು (ನದಿ ಪಾತ್ರದ ಗ್ರಾಮ ಲೆಕ್ಕಿಗರು) ನೇಮಕಮಾಡಲಾಗಿದೆ. ಅವರು ಸದಾ ಜಾಗೃತರಾಗಿರುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲ್ಲೂಕುಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲು ಸಿದ್ಧತೆ ಮಾಡಿಕೊಂಡಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ 08394-295655 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡುವಂತೆ ಅವರು ಸೂಚಿಸಿದ್ದಾರೆ.
ಜಲಾಶಯ ಭರ್ತಿಗೆ ಬೇಕಿದೆ 55 ಟಎಂಸಿ ನೀರುಜಲಾಶಯದ ಸಂಗ್ರಹ ಸಾಮಾರ್ಥ್ಯ ಗರಿಷ್ಠ 103 ಟಿಎಂಸಿ ಇದೆ. ಇದೀಗ ಜಲಾಶಯದಲ್ಲಿ 58 ಟಿಎಂಸಿಗೂ ಆಧಿಕ ನೀರು ಸಂಗ್ರಹವಿದೆ. ಜಲಾಶಯದ ಭರ್ತಿಗೆ ಒಟ್ಟು23 ಅಡಿ ಬಾಕಿಯಿದ್ದರೆ, ಇನ್ನೂ 55 ಟಿಎಂಸಿ ಯಷ್ಟು ನೀರು ಜಲಾಶಯಕ್ಕೆ ಹರಿದು ಬಂದು ಸಂಗ್ರಹವಾಗಬೇಕಿದೆ.