Advertisement
ಕಳೆದ ವಾರದಿಂದ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಈಗಾಗಲೇ ತುಂಗ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 1ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡಲಾಗಿದೆ. ಈ ಹಿನ್ನಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ದ್ವಿಗುಣಗೊಂಡಿದೆ. ಇದೇ ರೀತಿ ಒಳ ಹರಿವು ಹರಿದು ಬಂದಲ್ಲಿ ಇನ್ನು ನಾಲ್ಕಾರು ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ ಎಂದು ತುಂಗಭದ್ರಾ ಮಂಡಳಿ ಮೂಲಗಳು ತಿಳಿಸಿವೆ.
Related Articles
Advertisement
ಸದ್ಯ ಜಲಾಶಯದಲ್ಲಿ 40 ಟಿ.ಎಂ.ಸಿ. ಅಡಿಗೂ ಅಧಿಕ ನೀರಿನ ಸಂಗ್ರಹವಿದೆ. ಪ್ರಸ್ತುತ 40 ಸಾವಿರ ಕ್ಯುಸೆಕ್‌ಗೂ ಹೆಚ್ಚು ಒಳಹರಿವು ಇದೆ. ಸಚಿವ ಸಂಪುಟ ಬಳಿಕ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಯಾವ ಕಾಲುವೆಗಳಿಗೆ ಎಷ್ಟು ಪ್ರಮಾಣದಲ್ಲಿ, ಎಷ್ಟು ದಿನಗಳ ವರೆಗೆ ನೀರು ಹರಿಸಬೇಕು ಎಂಬ ಕುರಿತು ತೀರ್ಮಾನವಾಗಲಿದೆ.
6 ಟಿ.ಎಂ.ಸಿ ಅಡಿಗೂ ಅಧಿಕ ನೀರುತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರಿ ಹೆಚ್ಚಳ ಉಂಟಾಗಿದೆ. ಬುಧವಾರ ಬೆಳಗ್ಗೆ 40.135 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಸದ್ಯ ಜಲಾಶಯದಲ್ಲಿ 40.135 ಟಿ.ಎಂ.ಸಿ. ಅಡಿ ನೀರು ಸಂಗ್ರಹವಾಗಿದೆ. ಸೋಮವಾರ 16,736 ಕ್ಯುಸೆಕ್ ಒಳಹರಿವು ಇತ್ತು. 34.82 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. ಎರಡು ದಿನದಲ್ಲಿ 6 ಟಿ.ಎಂ.ಸಿ. ಅಡಿಗೂ ಅಧಿಕ ನೀರು ಬಂದಿದೆ.