Advertisement

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

12:50 PM Jul 21, 2024 | Team Udayavani |

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವು 1 ಲಕ್ಷ 12 ಸಾವಿರ ಕ್ಯುಸೆಕ್ ನಷ್ಟಿದ್ದು ಈ ಹಿನ್ನೆಲೆ ಯಾವ ಕ್ಷಣದಲ್ಲಾದರೂ ನದಿಗೆ ನೀರು ಹರಿ ಬಿಡಲಾಗುವುದು ಎಂದು ತುಂಗಭದ್ರಾ ಮಂಡಳಿ ಅಲರ್ಟ್ ಸಂದೇಶ ರವಾನಿಸಿದೆ.

Advertisement

ಜಲಾಶಯದಿಂದ 4000 ಕ್ಯುಸೆಕ್‌ನಿಂದ 6000 ಕ್ಯುಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುವುದು ಎಂದು  ಜಲಾಶಯ ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

74.582 ಟಿಎಂಸಿ ನೀರು ಸಂಗ್ರಹವಾಗಿದೆ. 105.788 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯ ಒಳ ಹರಿವು ಒಂದು ಲಕ್ಷ ದಾಟಿರುವ ಹಿನ್ನೆಲೆ ಈಗ ನದಿಗೆ ನೀರು ಹರಿಸಲಾಗುವುದು ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.

ತುಂಗಭದ್ರಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ನದಿಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚಿಸಿದೆ.

ತುಂಗಭದ್ರಾ ಜಲಾಶಯ ರಾಜ್ಯದ ರಾಯಚೂರು, ಬಳ್ಳಾರಿ,, ಕೊಪ್ಪಳ, ವಿಜಯನಗರ ಜಿಲ್ಲೆಗಳಿಗೆ ನೀರು ಒದಗಿಸುತ್ತಿದೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ನೀರು ಒದಗಿಸುತ್ತದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next