Advertisement
ನಗರದ ಹೊರವಲಯದಲ್ಲಿರುವ ಗುಂಡಾ ಸಸ್ಯೋದ್ಯಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ಭರವಸೆ ನೀಡಿ ವಚನಭ್ರಷ್ಟ ಆರೋಪ ಹೊತ್ತುಕೊಂಡರು. ಅದೇ ರೀತಿ ಯಡಿಯೂರಪ್ಪ ಕೊಟ್ಟ ಮಾತನ್ನು ಮೀರಬಾರದು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಬೇಕು. ಲಿಂಗಾಯತರ ಪ್ರಥಮ ಪಾದಯಾತ್ರೆ ಇದಾಗಿದ್ದು, ಈ ಪಾದಯಾತ್ರೆ ಲಿಂಗಾಯತರ ಒಳಿತಿಗಾಗಿ, ಮಕ್ಕಳ ಶೈಕ್ಷಣಿಕ ಏಳ್ಗೆಗಾಗಿ ಮಾಡಲಾಗುತ್ತಿದೆ. 26 ವರ್ಷಗಳಿಂದ ಶಾಂತಿ, ಸಹನೆಯಿಂದಮೀಸಲಾತಿಗಾಗಿ ಮನವಿ ನೀಡುತ್ತಿದ್ದೇವೆ. ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಮಗೆ ಬಸವಣ್ಣರ ಶಾಂತಿ ಹಾಗೂ ಚನ್ನಮ್ಮರಂತೆ ಹೋರಾಡುವುದು ಗೊತ್ತು. ವಿಧಾನಸೌಧದ ಕಡೆಗೆ ಪಾದಯಾತ್ರೆ ಹೊರಟಿದ್ದು, ಸರ್ಕಾರ ಕೂಡಲೇ ತನ್ನ ನಿಲುವು ಪ್ರಕಟಿಸಬೇಕು ಎಂದರು. ಸರ್ಕಾರ ಮೀಸಲಾತಿ ಹೋರಾಟವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಂಪುಟ ರಚನೆಯಲ್ಲೇ ಕಾಲ ಕಳೆಯಲಾಗುತ್ತಿದೆ. ಈ ಕೂಡಲೇ ವರದಿ ತರಿಸಿಕೊಂಡು ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಗಡಿ ಭಾಗವಾದ ಹರಪನಹಳ್ಳಿಯಲ್ಲಿ ಪಾದಯಾತ್ರೆ ಮುಗಿಸುವುದರೊಳಗೆ ಮುಖ್ಯಮಂತ್ರಿಗಳು ನಮಗೆ ಸಿಹಿ ಸುದ್ದಿ ನೀಡಬೇಕು. ಪಂಚಮಸಾಲಿ ಸಮಾಜದ 15 ಶಾಸಕರು ಸದ್ಯ ಬಿಜೆಪಿಯಲ್ಲಿದ್ದಾರೆ. ಉತ್ತರ ಕರ್ನಾಟದಲ್ಲಿ ಬಿಜೆಪಿ ಪ್ರಬಲವಾಗಲು ಪಂಚಮಸಾಲಿ ಸಮುದಾಯವೇ ಕಾರಣ. ಯಡಿಯೂರಪ್ಪನವರು ನಂಬಿಕೆ ಉಳಿಸಿಕೊಳ್ಳಬೇಕು. ಈ ಹಿಂದೆ ಕುಮಾರಸ್ವಾಮಿ ಅವರು ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡು ಅಧಿ ಕಾರ ಕಳೆದುಕೊಂಡರೋ ಹಾಗೇ ಯಡಿಯೂರಪ್ಪನವರ ವಿಷಯದಲ್ಲಿ ಆಗಬಾರದು ಎಂದು ಎಚ್ಚರಿಸಿದರು.
Related Articles
Advertisement
ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್