ಮಡಿಕೇರಿ: ಹೊಸ್ಕೇರಿ ಗ್ರಾಮ ಪಂಚಾಯತಿ ಆವರಣದಲ್ಲಿ ಗ್ರಾಮ ಪಂಚಾಯತ್ ಮಟ್ಟದ ತ್ರೆçಮಾಸಿಕ ಕೆಡಿಪಿ ಸಭೆ ಗ್ರಾ.ಪಂ ಅಧ್ಯಕ್ಷೆ ಮಮತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸರಕಾರದ ಹೊಸ ಯೋಜನೆ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯವ ಕೆಡಿಪಿ ಸಭೆಯಂತೆ ಗ್ರಾಮ ಮಟ್ಟದಲ್ಲೂ ಪ್ರಗತಿ ಪರಿಶೀಲನೆ ನಡೆಯಬೇಕು ಎಂಬ ಸರಕಾರ ಆದೇಶದಂತೆ ಹೊಸ್ಕೇರಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪ್ರಥಮ ಸಭೆ ನಡೆಯಿತು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಂಜನಾಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಹೊಸ ಕಾರ್ಯಕ್ರಮದ ಮಾಹಿತಿ ನೀಡಿದರು. ಹೋಬಳಿ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರು ಒಳಗೊಂಡಂತೆ ನಡೆಯುವ ಈ ಸಭೆಯು ಗ್ರಾಮದ ಪ್ರಗತಿಗೆ ಪೂರಕವಾಗಲಿದೆ ಎಂದು ಅವರು ನುಡಿದರು.
ಅಧ್ಯಕ್ಷೆ ಮಮತಾ ಮಾತಾನಾಡಿ, ಇಂತಹ ಸಭೆಯು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಯುವುದರಿಂದ ಗ್ರಾಮ ಸಮಸ್ಯೆಗಳನ್ನು ಅರಿತು ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಅನುಕೂಲವಾಗಲಿದೆ. ಈ ಸಭೆಗೆ ಹೋಬಳಿ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಬರಬೇಕು ಎಂದರು.
ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಗ್ರಾಮ ಮಟ್ಟದ ತ್ರೆçಮಾಸಿಕ ಕೆ ಡಿ ಪಿ ಸಭೆಗೆ ಅಧಿಕಾರಿಗಳು ಹಾಜರಾಗಿ ಮಾಹಿತಿಯನ್ನು ನೀಡಬೇಕು. ಈ ಸಭೆಗೆ ಗೈರು ಹಾಜರಾದ ಇಲಾಖೆಯವರಿಗೆ ಮುಂದಿನ ಸಭೆಗೆ ಕಡ್ಡಾಯವಾಗಿ ಹಾಜುರಾಗುವಂತೆ ಪುಸ್ತಕದಲ್ಲಿ ನಮೂದಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವಂತಾಗಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಮತ್ತು ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.