Advertisement
ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳೆಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರಿದ ಅಪರೂಪದ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಸಾಕ್ಷಿಯಾಗಿದೆ.
Related Articles
ತಾಂಡಗಳಿಗೆ ಸೀಮಿತವಾಗಿದ್ದ ಲಂಬಾಣಿ ಕಸೂತಿ ಕಲೆಗೆ ಸಾಂಸ್ಥಿಕ ರೂಪ ನೀಡಿ ಜಿಐ (ಗ್ಲೋಬಲ್ ಇಂಡಿಕೇಷನ್) ಟ್ಯಾಗ್ ಪಡೆಯುವಲ್ಲಿ ಸಂಡೂರಿನ ಕಲಾ ಕೇಂದ್ರ ಯಶಸ್ವಿಯಾಗಿದೆ. ವಿವಿಧ ರೀತಿಯ 29 ಕಲಾತ್ಮಕ ಕಸೂತಿಗಳನ್ನು ಇಲ್ಲಿ ಮಾಡಲಾಗುತ್ತಿದೆ. ಈ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ಯುನೆಸ್ಕೋ ಮನ್ನಣೆ ಹಾಗೂ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ ಲಭಿಸಿದೆ. ಈಗ ಹಂಪಿಯಲ್ಲಿ ಜಿ20 ಶೃಂಗ ಸಭೆಯಲ್ಲಿ ಗಿನ್ನಿಸ್ ದಾಖಲೆಯೂ ಮುಡಿಗೇರಿದೆ.
Advertisement
ಪ್ರಧಾನಿ ಮೋದಿ ಮೆಚ್ಚುಗೆಲಂಬಾಣಿ ಕಸೂತಿ ಗಿನ್ನಿಸ್ ದಾಖಲೆ ಸೇರಿದ್ದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ಲಾಘನೀಯ ಪ್ರಯತ್ನ. ಇದು ಲಂಬಾಣಿ ಕಲೆ ಮತ್ತು ಕರಕುಶಲತೆಯನ್ನು ಜನಪ್ರಿಯಗೊಳಿಸುತ್ತದೆ. ಸಾಂಸ್ಕೃತಿಕ ಉಪಕ್ರಮಗಳಲ್ಲಿ ನಾರಿ ಶಕ್ತಿಯ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತದೆ’ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿ
ಅಭಿನಂದಿಸಿದ್ದಾರೆ.