ಹೊಸಪೇಟೆ: ಏಕಾಏಕಿ ಇನ್ನೋವಾ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದ ಘಟನೆ ತಾಲೂಕಿನ ಧರ್ಮಸಾಗರದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಅದೃಷ್ಟತ್ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಘಟನೆಯಲ್ಲಿ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಹೊಸಪೇಟೆಯಿಂದ ಬಳ್ಳಾರಿ ಕಡೆ ತೆರಳಿದ್ದ ರಾಷ್ಟ್ರೀಯ ಹೆದ್ದಾರಿ 63ರ ಧರ್ಮಸಾಗರ ಗ್ರಾಮದ ಬಳಿ ನಿಂತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಮೇಲ್ನೊಟಕ್ಕೆ ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ದೌಡಾಯಿಸಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.