Advertisement

ಮಹಿಳೆಯರು ಕಾನೂನು ಜ್ಞಾನ ತಿಳಿದುಕೊಳ್ಳಿ : ಶ್ವೇತಾಂಬರಿ

06:36 PM Mar 09, 2020 | Naveen |

ಹೊಸಪೇಟೆ: ಮಹಿಳೆಯರು ಕಾನೂನುಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ನಗರದ ವಕೀಲರಾದ ಶ್ವೇತಾಂಬರಿ ಎಸ್‌.ಪಿ. ಸಲಹೆ ನೀಡಿದರು.

Advertisement

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕನ್ನಡ ವಿಶ್ವವಿದ್ಯಾಲಯದಲ್ಲಿ ದೇಹ ಘನತೆ; ಲೈಂಗಿಕ ಕಿರುಕುಳದ ಸ್ವರೂಪ ಕಾನೂನುಗಳನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಭಾನುವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಸಮಾಜದಿಂದ ಸ್ವಾತಂತ್ರ್ಯ ಮತ್ತು ಕಾಳಜಿ ಮಾತ್ರ ಅಪೇಕ್ಷಿಸುತ್ತಾರೆ. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆ ಮತ್ತು ಪುರುಷರ ಪಾತ್ರ ಮುಖ್ಯವಾ ಗಿದೆ. ಸರ್ಕಾರಗಳು ಕಾಲಕಾಲಕ್ಕೂ ಮಹಿಳೆಯರ ಪರವಾಗಿ ಅನೇಕ ಕಾನೂನು ಜಾರಿಗೆ ತಂದಿದ್ದು, ಅವುಗಳನ್ನು ಮಹಿಳೆಯರು ಅರಿಯಬೇಕು ಎಂದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಫೋಕ್ಸೋ ಕಾಯ್ದೆ, ಬಾಲ್ಯವಿವಾಹ ತಡೆ ಕಾಯ್ದೆ, ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಸರ್ಕಾರ ಜಾರಿ ತಂದಿರುವ ಅನೇಕ ಕಾನೂನುಗಳನ್ನು ಮಹಿಳೆಯರು ಅರಿಯಬೇಕು ಎಂದರು.

ಮಹಿಳೆ ಅಶಕ್ತಳು, ದುರ್ಬಲಳು ಎಂಬ ಅವಳ ಬಗೆಗಿನ ಸಮಾಜದ ದೃಷ್ಟಿಕೋನ ಕುಲಪತಿ ಡಾ.ಸ.ಚಿ.ರಮೇಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ರಂಗಗಳಲ್ಲೂ ಯಶಸ್ಸು ಕಾಣುತ್ತಿದ್ದಾರೆ. ಸಂವಿಧಾನದಲ್ಲಿ ಮಹಿಳೆಗೆ ಸಮಾನ ಅವಕಾಶ ನೀಡಲಾಗಿದ್ದು, ಆಸ್ತಿಯಲ್ಲಿ ಮಹಿಳೆಗೂ ಸಮಪಾಲನ್ನು ನೀಡಲಾಗಿದೆ. ಮಹಿಳೆ ಆಸ್ತಿಯಲ್ಲಿ ಪಾಲನ್ನು ಕೇಳಿದರೆ, ಸಂಸಾರದಲ್ಲಿ ಒಡಕುಗಳು ಉಂಟಾಗುವ ಸಂಭವ ಹೆಚ್ಚಾಗುತ್ತಿದೆ. ಉದ್ಯೋಗಸ್ಥ ಉದ್ಯೋಸ್ಥ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ  ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಮಹಿಳಾ ಸಬಲೀಕರಣವಾಗದೇ ಸಮ ಸಮಾಜ ನಿರ್ಮಾಣ ಅಸಾಧ್ಯ ಎಂದರು.

ಪ್ರಾಧ್ಯಾಪಕ ಡಾ.ಅಮರೇಶ ನುಗಡೋಣಿ, ವಿವಾಹ ಮತ್ತು ಕುಟುಂಬದ ಘನತೆ ಮರ್ಯಾದೆಗೇಡು ಹತ್ಯೆ ಪ್ರಕರಣಗಳನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಾತನಾಡಿ, ಸಮಾಜದಲ್ಲಿ ಜಾತಿ ವ್ಯವಸ್ಥೆ ಹಿಂದೆಂದಿಗಿಂತಲೂ ಬಲಗೊಂಡಿದ್ದು, ಜಾತಿ ಮತ್ತು ಅಂತಸ್ತಿನ ಕಾರಣದಿಂದ ಮರ್ಯಾದೆಗೇಡು ಹತ್ಯೆ ಪ್ರಕರಣಗಳಲ್ಲಿ ಹೆಚ್ಚು ಮಹಿಳೆಯರು ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿ ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ್ಯವಿವಾಹ, ಆ್ಯಸಿಡ್‌ ದಾಳಿ, ಬಲವಂತದ ವೇಶ್ಯಾವಾಟಿಕೆಯಂತಹ ದೌರ್ಜನ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳನ್ನು ಮೆಟ್ಟಿ ನಿಲ್ಲಲು ಕಾನೂನು ಅರಿಯುವುದರ ಜತೆಗೆ ಅವುಗಳನ್ನು ಬಳಸುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದರು.

Advertisement

ಕುಲಸಚಿವ ಡಾ.ಎ.ಸುಬ್ಬಣ್ಣ ರೈ, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶೈಲಜ ಹಿರೇಮಠ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ಡೀನರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶಿಲ್ಪಾ ನಿರೂಪಿಸಿದರು. ಬೊಮ್ಮಯ್ಯ ವಂದಿಸಿದರು. ಕನ್ನಡ ಮಹಿಳಾ ಅಧ್ಯಯನ ವಿಭಾಗ ಮತ್ತು ಕಾರ್ಯನಿರತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ನಿವಾರಣೆ ಸಮಿತಿ ಜಂಟಿಯಾಗಿ ಕಾರ್ಯಕ್ರಮ ಸಂಘಟಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next