Advertisement

ವೇತನ ಹೆಚ್ಚಳಕ್ಕೆ ಬಿಸಿಯೂಟ ತಯಾರಕರ ಆಗ್ರಹ

12:39 AM Jan 22, 2020 | Lakshmi GovindaRaj |

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ನ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಫೆಡರೇಷನ್‌ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಬಿಸಿಯೂಟ ತಯಾರಕರಿಗೆ 2 ಲಕ್ಷ ರೂ. ಅಪಘಾತ ಪರಿಹಾರ ಮತ್ತು 5 ಲಕ್ಷ ರೂ. ಮರಣ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಈಗ ನೀಡುತ್ತಿರುವ ವೇತನ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕು. ಅಲ್ಲದೆ ಸರ್ಕಾರ ಬಿಸಿಯೂಟ ವ್ಯವಸ್ಥೆಯನ್ನು ಖಾಸಗಿ ಯವರಿಗೆ ನೀಡಲು ಹೊರಟಿದ್ದು ಇದನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು. 60 ವರ್ಷ ವಯಸ್ಸಾದ ಬಿಸಿಯೂಟ ತಯಾರಕರಿಗೆ ಮಾಸಿಕ 3 ಸಾವಿರ ರೂ. ನಿವೃತ್ತಿ ಪಿಂಚಣಿ ಮತ್ತು 2 ಲಕ್ಷ ರೂ. ಇಡುಗಂಟು ಹಣ ನೀಡಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next