ಮಂಡ್ಯ: 60 ವರ್ಷ ವಯೋಮಾನದ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿರುವ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸರ್‌ಎಂವಿ ಪ್ರತಿಮೆ ಎದುರು ಜಮಾ ಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ಜಿಪಂ ಕಚೇರಿಗೆ ತೆರಳಿ ಧರಣಿ ನಡೆಸಿದರು.
ಮರು ಆದೇಶ ನೀಡಿ: ಮಧ್ಯಾಹ್ನದ ಬಿಸಿಯೂಟ ಯೋಜನೆ ಪ್ರಾರಂಭವಾದಾಗಿನಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆ ಗಟ್ಟಲು ಶಿಕ್ಷಣ ಇಲಾಖೆ ಸರ್ಕಾರಿ ಮತ್ತು ಅನು ದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿ ಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡು ಗಡೆ ಮಾಡಬೇಕು. ಮಾ.31, 2022ಕ್ಕೆ ಬಿಸಿ ಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರ ಡಿಸಿರುವ ಸುತ್ತೋಲೆ ಬದಲಾಯಿಸಿ ಏ.10, 2022ಕ್ಕೆ ಮರು ಆದೇಶ ನೀಡಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರೆಂದು ಗುರುತಿಸಿ: ಬಜೆಟ್‌ನಲ್ಲಿ ಬಿಸಿ ಯೂಟ ನೌಕರರಿಗೆ ಹೆಚ್ಚಳ ಮಾಡಿದ 1 ಸಾವಿರ ರೂ. ವೇತನವನ್ನು ಜನವರಿ 2022ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಕಾಯಂ ಮಾಡಬೇಕು. ಕಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇ ಳದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ನಮ್ಮ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 6 ಸಾವಿರ, 5 ಸಾವಿರ ರೂ. ಹೆಚ್ಚಳ ಮಾಡಬೇಕು. ಬೇಸಿಗೆ ಮತ್ತು ದಸರಾ ರಜೆ ವೇತನ ಕಟ್ಟಿಕೊಡ ಬೇಕು. ಎಲ್ಲರಿಗೂ ಅನ್ವಯವಾಗದೇ ಇರುವ ಮಾನ್ -ಧನ್ ಯೋಜನೆ ಮಾಡಿಸಲು ಇಲಾಖೆ ಯಿಂದ ಒತ್ತಾಯಿಸಬಾರದು ಎಂದು ಆಗ್ರಹಿಸಿದರು.
ಮೇಲ್ವಿಚಾರಣೆ ನಡೆಸಿ: ಶಾಲಾ ಅವ ಧಿ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದ ಕೆಲಸ ಇವರಿಗೆ ನೀಡಿ. ಈ ಯೋಜನೆಯಿಂದ ವೇತನ ನೀಡಬೇಕು. ಬಿಸಿಯೂಟ ನೌಕರರನ್ನು ಕಾಯಂ ಮಾಡಿ ಶಾಸನಾತ್ಮಕ ಸವಲತ್ತು ಜಾರಿ ಮಾಡಬೇಕು. ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀನೊಳಗೆ ವೇತನ ಪಾವತಿ ಮಾಡಬೇಕು. ಬಿಸಿಯೂಟ ನೌಕರರನ್ನು ನೇರವಾಗಿ ಶಿಕ್ಷಣ ಇಲಾಖೆಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ 2 ಜನ ಅಡುಗೆಯ ವರು ಇರಲೇಬೇಕು ಎಂದು ಒತ್ತಾಯಿಸಿದರು.
ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಮಹದೇವಮ್ಮ, ಸಿ.ಕುಮಾರಿ, ಕೆ.ಎಸ್. ಸುನೀತಾ, ಸುನಂದ, ಲಕ್ಷ್ಮೀ, ವೆಂಕಟಲಕ್ಷ್ಮೀ, ಹೇಮಾವತಿ, ಭಾಗ್ಯಮ್ಮ, ಶಾರದಮ್ಮ, ಸುನಂದಾ, ಮಂಜುಳಾ ಮತ್ತಿತರರಿದ್ದರು.