Advertisement

ಕನ್ನಡ ಖಾಸಗಿ ಶಾಲಾ ಮಕ್ಕಳಿಗೂ ಬಿಸಿಯೂಟ: ಸಿಎಂ ಸಮ್ಮತಿ

11:22 PM Oct 23, 2019 | Lakshmi GovindaRaju |

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಮಾದರಿಯಲ್ಲೇ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೂ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

Advertisement

ಖಾಸಗಿ ಕನ್ನಡ ಶಾಲೆಗಳನ್ನು ಉಳಿ ಸುವ ನಿಟ್ಟಿನಲ್ಲಿ ಆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸರ್ಕಾರದ ವತಿಯಿಂದ ಒದಗಿಸುವ ಕುರಿತು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಮುಖ್ಯಮಂತ್ರಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಮಧ್ಯಾಹ್ನದ ಬಿಸಿಯೂಟ ವಿಭಾಗದ ಅಧಿಕಾರಿಗಳ ಜತೆ ಈ ಕುರಿತು ಹೆಚ್ಚಿನ ಚರ್ಚೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕನ್ನಡ ಅನುಮತಿ, ಇಂಗ್ಲಿಷ್‌ ಮಾಧ್ಯಮ: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು, ಇಂಗ್ಲಿಷ್‌ ಮಾಧ್ಯಮ ನಡೆಸುತ್ತಿವೆ. ಕನ್ನಡ ಮಾಧ್ಯಮವನ್ನು ಮಾತ್ರ ಆಯ್ಕೆ ಮಾಡಿಕೊಂಡು ಯಾವ ರೀತಿ ಈ ವ್ಯವಸ್ಥೆಯನ್ನು ಆ ಶಾಲೆಗಳಲ್ಲಿ ಜಾರಿಗೆ ತರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಇದಕ್ಕೆ ಸರ್ಕಾರದಿಂದ ಆಗುವ ಹೆಚ್ಚುವರಿ ವೆಚ್ಚದ ಬಗ್ಗೆ ಪರಿಶೀಲನೆ ನಡೆದಿರುವ ಸಾಧ್ಯತೆಯೂ ಇಲ್ಲ ಎಂದು ಶಿಕ್ಷಣ ತಜ್ಞರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next