Advertisement
ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ಸುಹೇಲ್ ಎಂಬ ಯುವಕ ಬೆಂದ ಗಾಯಗಳಿಗೆ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಸಮುದಾಯಕ್ಕೆ ಸೇರಿದ ಮದೆನಾಡು ಗ್ರಾಮದ ಯುವತಿ ಹಾಗೂ ಸುಹೇಲ್ ಕಳೆದೆರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿ ಮನೆಯವರಿಗೆ ಇದು ಇಷ್ಟವಿರಲಿಲ್ಲ ಎನ್ನಲಾಗಿದೆ.
ಯುವತಿಯ ಮನೆಗೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿದ ಸಂದರ್ಭ ಯುವತಿಯ ಮನೆಯವರು ಸುಹೇಲ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಬಿಸಿನೀರು ಎರಚಿದರು. ಅಲ್ಲದೆ ದ್ವಿಚಕ್ರ ವಾಹನವನ್ನು ಜಖಂಗೊಳಿಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.