Advertisement
ಕಳೆದ ಎರಡ್ಮೂರು ವರ್ಷಗಳಿಂದ ಕೋವಿಡ್ ಸೋಂಕು ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮ ಕ್ಕೆ ತೊಡಕಾಗಿತ್ತು. ಜತೆಗೆ ಕೋವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರು ಸ್ವಗ್ರಾಮಗಳಿಗೆ ಮರಳಿರಲಿಲ್ಲ. ಆದರೆ, ಇದೀಗ ಕ್ರಿಸ್ ಮಸ್ ಮತ್ತು ಹೊಸ ವರ್ಷದ ಪ್ರಯು ಕ್ತ ತಮಗೂ ಹಾಗೂ ತಮ್ಮ ಮಕ್ಕಳಿಗೂ ರಜೆ ದೊರೆತಿರುವ ಹಿನ್ನೆಲೆಯಲ್ಲಿ ಹಲವು ರಾಷ್ಟ್ರಗಳಲ್ಲಿ ನೆಲೆಸಿದ್ದ ಅನಿವಾಸಿ ಭಾರತೀಯರು ತವರಿನತ್ತ ಮುಖ ಮಾಡಿದ್ದಾರೆ. ಇವರಲ್ಲಿ ಹಲವು ಮಂದಿ ಬೆಂಗಳೂರಿನಲ್ಲಿ ಬೀಡು ಬಿಡಲು ನಿರ್ಧರಿಸಿದ್ದು, ಹೀಗಾಗಿಯೇ ಸಿಲಿಕಾನ್ ಸಿಟಿಯಲ್ಲಿನ ಹಲವು ಹೋಟೆಲ್‌ಗಳ ಕೊಠಡಿಗಳು ಭರ್ತಿಯಾಗಿವೆ.
Related Articles
Advertisement
ಪ್ರತ್ಯೇಕ ಮಾರ್ಗಸೂಚಿ ಬೇಕು : ರಾತ್ರಿ 3 ಗಂಟೆ ವರೆಗೂ ವ್ಯಾಪಾರಕ್ಕೆ ಅವಕಾಶ ನೀಡಿ ಹೊಸ ವರ್ಷದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ 3ಗಂಟೆಯವರೆಗೆ ಹೋಟೆಲ್ ಗಳನ್ನು ತೆರೆಯಲು ಅವಕಾಶ ನೀಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ನಗರ ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದೆ. ಕಳೆದ ಎರಡ್ಮೂರು ವರ್ಷಗಳಿಂದ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಹೇಳಿಕೊಳ್ಳುವ ರೀತಿ ಯಲ್ಲಿ ನಡೆದಿರಲಿಲ್ಲ.ಆ ಹಿನ್ನೆಲೆಯಲ್ಲಿ ಈ ವರ್ಷ ರಾತ್ರಿ 3 ಗಂಟೆಯವರೆಗೂ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಕೋರಿದೆ. ಆದರೆ ಬಂದೋಬಸ್ತ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದ ಕಾರ ಣ ನಗರ ಪೊಲೀಸ್ ಆಯುಕ್ತರು ಹಿಂದೇಟು ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಹಿನ್ನೆಲೆ ಸರ್ಕಾರ ಮಾರ್ಗಸೂಚಿಗಳನ್ನು ಜಾರಿಗೊಳಿ ಸಿ ದೆ. ಹೊಸ ವರ್ಷದ ಆಚರಣೆ ಸಂಬಂಧ ಪ್ರತ್ಯೇಕ ಮಾರ್ಗಸೂಚಿಯ ಬಗ್ಗೆ ಈವರೆಗೂ ಪಾಲಿಕೆ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆ ಸಲ್ಲಿಸಿಲ್ಲ. ● ತುಷಾರ್ ಗಿರಿನಾಥ್, ಪಾಲಿಕೆ ಮುಖ್ಯ ಆಯುಕ್ತ
– ದೇವೇಶ ಸೂರಗುಪ್ಪ