ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಭಾನುವಾರ ಬೆಳಗ್ಗೆ ಬೆಳಗಾವಿ, ಗೋವಾ ಹಾಗೂ ತಮಿಳುನಾಡಿನ ಕೊಡೈಕೆನಾಲ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.
ಶುಕ್ರವಾರವಷ್ಟೇ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಐದು ದಿನಗಳ ಕಾಲ ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು, ಗೋವಾ, ಬೆಳಗಾವಿ ಮತ್ತು ಕೊಡೈಕೆನಾಲ್‌ನಲ್ಲಿ ನೆಲೆಸಿರುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಜತೆ ಮಂಜನಿಗೆ ಸಂಪರ್ಕ ಇರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಶಂಕಿತರು ನೆಲೆಸಿರುವ ಸ್ಥಳಗಳಿಗೆ ಕರೆದೊಯ್ಯಲಾಗುವುದು ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
ಹಿಂದೂಪರ ಸಂಘಟನೆಯಲ್ಲಿ ಸಕ್ರಿಯನಾಗಿ ರಾಜ್ಯ ಮತ್ತು ನೆರೆ ರಾಜ್ಯಗಳಲ್ಲಿನ ದೊಡ್ಡ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಗೋವಾ, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದ ಕೆಲಯುವ ಪಡೆಗಳೊಂದಿಗೆ ಸಂಪರ್ಕವಿದೆ ಎಂದು ಎಸ್ ಐಟಿ ಶಂಕಿಸಿದೆ. ಹೀಗಾಗಿ ಸುಳ್ಳು ಪತ್ತೆ ಪರೀಕ್ಷೆ ಹಿನ್ನೆಲೆ ಕೋರ್ಟ್‌ಗೆ ಮನವಿ ಮಾಡಲಾಗಿದ್ದು ವಿವಿಧ
ಪ್ರದೇಶಗಳಿಗೆ ಕರೆದೊಯ್ಯುಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.