Advertisement

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ; ಪರಿಹಾರ ನಿರೀಕ್ಷೆಯಲ್ಲಿ ಕುಟುಂಬ

02:40 PM Jul 28, 2021 | Team Udayavani |

ಹುಣಸಗಿ: ತಾಲೂಕಿನ ಕನ್ನೆಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹಪಯೋಗಿ ವಸ್ತುಗಳು ಹಾಗೂ 15 ಗ್ರಾಂ. ಬಂಗಾರ ಸೇರಿದಂತೆ 80,000 ರೂಪಾಯಿ ನಗದು ಹಣ ಮತ್ತು ಕೃಷಿ ಕ್ರಿಮಿನಾಶಕ ಔಷಧ ಗೊಬ್ಬರ, ಕೆಲ ದಾಖಲೆಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

Advertisement

ಚಾಂದಬೀ ನದಾಫ್ ಎನ್ನುವವರ ಮನೆಯೇ ಸುಟ್ಟಿದ್ದು, ಈಗಾ ಕುಟುಂಬ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಪಡೆದುಕೊಂಡಿದ್ದಾರೆ. ಅಂದಾಜು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮವಾಗಿದ್ದಾವೆ ಎನ್ನಲಾಗಿದೆ.

ಇದನ್ನೂ ಓದಿ :ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

 

Advertisement

Udayavani is now on Telegram. Click here to join our channel and stay updated with the latest news.

Next