Advertisement
ಸೋಮವಾರ ಎಎನ್ ಐ ನ್ಯೂಸ್ ಏಜೆನ್ಸಿ ಈ ವೀಡಿಯೋವನ್ನು ತನ್ನ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಅತೀ ವೇಗದಲ್ಲಿ ಹರಿದು ಬರುತ್ತಿರುವ ಪ್ರವಾಹದ ನೀರಿನ ಹೊಡೆತಕ್ಕೆ ಇಡೀ ಮನೆ ನಿಧಾನಕ್ಕೆ ಕುಸಿದು ಬೀಳುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಯಾವುದೇ ಸಾವು, ನೋವಿನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.