Advertisement
ದಿಢೀರ್ ಆಗಿ ಸುರಿದ ಭಾರೀ ಮಳೆ ಆತಂಕವನ್ನು ಸೃಷ್ಟಿಸಿತ್ತಲ್ಲದೆ, ಹಾನಿ ಉಂಟು ಮಾಡಿತು. ಕೈಗಾರಿಕಾ ಬಡಾವಣೆ, ಕಾವೇರಿ ಲೇಔಟ್, ಓಂಕಾರೇಶ್ವರ ರಸ್ತೆ, ಗೌಳಿಬೀದಿ, ಇಂದಿರಾನಗರ, ಪತ್ರಿಕಾಭವನ ವ್ಯಾಪ್ತಿಯಲ್ಲಿ ಪ್ರವಾಹದ ರೀತಿಯಲ್ಲಿ ಚರಂಡಿಗಳು ತುಂಬಿ ರಸ್ತೆಯಲ್ಲಿ ನೀರು ಹರಿದಿದೆ. ಕಾವೇರಿ ಲೇಔಟ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಮನೆಗಳಿಗೆ, ವಿವಿಧ ವಾಣಿಜ್ಯ ಮಳಿಗೆಗಳಿಗೆ, ಸಭಾಂಗಣಕ್ಕೆ ನೀರು ನುಗ್ಗಿದೆ.
Related Articles
Advertisement
ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:200 ಕೋಟಿಯೊಂದಿಗೆ ಸಿಕ್ಕಿಬಿದ್ದಿದ್ದ ಯುಪಿ ಉದ್ಯಮಿಗೆ ಜಾಮೀನು
32 ಇಂಚು ಅಧಿಕ ಮಳೆ
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಗೆ 32 ಇಂಚು ಅಧಿಕ ಮಳೆಯಾಗಿದೆ. ಇಲ್ಲಿಯವರೆಗಿನ ಮಳೆ 2863.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2087.52 ಮಿ.ಮೀ ಮಳೆಯಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 6.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.42 ಮಿ.ಮೀ. ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.90 ಮಿ.ಮೀ. ಕಳೆದ ವರ್ಷ ಇದೇ ದಿನ 2.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4161.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2932.71 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 7.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2169.25 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1680.49 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2260.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1649.38 ಮಿ.ಮೀ. ಮಳೆಯಾಗಿತ್ತು.