Advertisement

ವರದಕ್ಷಿಣೆ ಕಿರುಕುಳದ ಆರೋಪ: 9 ತಿಂಗಳ ಮಗುವನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ

04:25 PM Mar 15, 2022 | Team Udayavani |

ಕೊಳ್ಳೇಗಾಲ: ಕೌಟುಂಬಿಕ ಕಲಹದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.

Advertisement

ವಿದ್ಯಾಶ್ರೀ (22) ಆತ್ಮಹತ್ಯೆಗೆ ಶರಣಾದ ಗೃಹಿಣಿ ಎಂದು ತಿಳಿದು ಬಂದಿದೆ. ಈಕೆಗೆ 9 ತಿಂಗಳ ಹೆಣ್ಣು ಮಗುವಿದೆ.

ಬಾಗಲಕೋಟೆಯ ವಿದ್ಯಾಶ್ರೀ ಇವರನ್ನು ಕಳೆದ ಮೂರು ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ಆನಂದ್ ಕಾಂಬಳೆ ಜೊತೆ  ಮದುವೆ ಮಾಡಿಕೊಡಲಾಗಿತ್ತು. ಹನೂರು ತಾಲ್ಲೂಕಿನ ಹೂಗ್ಯಂ ಗ್ರಾ.ಪಂನ ಪಿಡಿಒ ಆಗಿರುವ ಆನಂದ್ ಕಾಂಬಳೆ ಕೊಳ್ಳೆಗಾಲದಲ್ಲಿ ವಾಸ ಮಾಡಿಕೊಂಡಿದ್ದರು.

ಇದನ್ನೂ ಓದಿ: ಬೆಂಗಳೂರು: ಸೆಲ್ಫಿ ವಿಡಿಯೋ ಮಾಡಿ 23ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಆನಂದ್ ಕಾಂಬಳೆ ನಮ್ಮ ಮಗಳನ್ನು ವರದಕ್ಷಿಣೆಗಾಗಿ ಪೀಡಿಸುತ್ತಿದ್ದ. ಆಗಾಗ ಊರಿನಿಂದ ಹಣ ತರುವಂತೆ ಮಗಳಿಗೆ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದ. ಮಗಳು ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿ ಆರೋಪಿಸಿದ್ದಾರೆ.

Advertisement

ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಆರೋಪಿ ಆನಂದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮತನಿಖೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next