Advertisement

ವಸತಿ ಯೋಜನೆ: ಶೀಘ್ರ ಅರ್ಜಿ ವಿಲೇವಾರಿಗೆ ಜಿಲ್ಲಾಧಿಕಾರಿಗೆ ಸೂಚನೆ

10:16 PM Dec 01, 2019 | Team Udayavani |

ಮಡಿಕೇರಿ : ವಸತಿ ಯೋಜನೆಗಳ ಫ‌ಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಎಚ್ಚರಿಕೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಸತಿ ಯೋಜನೆಗಳ ದಾಖಲಾತಿಗಳನ್ನು ತುರ್ತಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸುವಂತೆ ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅತಿವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳ ಬೆಳೆ ಪರಿಹಾರದ ವಿವರದ ಪ್ರಗತಿ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜು ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಬಾಕಿ ಉಳಿದಿರುವ ಬೆಳೆ ಪರಿಹಾರವನ್ನು ಒಂದು ವಾರದೊಳಗೆ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ನಿವೇಶನ ಲಭ್ಯವಿರದ ಕಡೆ ಕಂದಾಯ ಅಧಿಕಾರಿಗಳು ಹಿಂಬರಹ ನೀಡಬೇಕು. ಹಾಗೂ ಅರಣ್ಯ ವ್ಯಾಪ್ತಿಯ ಪ್ರದೇಶಗಳಲ್ಲಿ ಇರುವಂತಹ ಅಂಗನವಾಡಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳ ಪರೀಶಿಲನೆ ನಡೆಸಿ ಸರ್ಕಾರಿ ನಿವೇಶನ ಲಭ್ಯವಿಲ್ಲದಲ್ಲಿ ಖಾಸಗಿ ನಿವೇಶನ ಖರೀದಿ ಹಾಗೂ ದಾನಿಗಳು ಮುಂದೆ ಬಂದಲ್ಲಿ ಅಂತಹವರಿಂದ ನಿವೇಶನ ಪಡೆದು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

Advertisement

ವಿದ್ಯಾರ್ಥಿ ನಿಲಯಗಳು, ಸಮುದಾಯ ಭವನಗಳು ಹಾಗೂ ಕಸ ವಿಲೇವಾರಿಗೆ ಅಗತ್ಯವಿರುವ ಜಾಗವನ್ನು ಆದ್ಯತೆ ಮೇರಗೆ ಗುರುತಿಸಿ ಸರ್ವೆ ಮಾಡಿ ಸಂಬಂಧಪಟ್ಟ ಇಲಾಖೆಗಳ ಸುರ್ಪದಿಗೆ ನೀಡುವಂತೆ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಅನೀಶ್‌ ಕಣ್ಮಣಿ ಜಾಯ್‌ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ, ತಹಶೀಲ್ದಾರ್‌ ಗೋವಿಂದರಾಜು, ಮಹೇಶ್‌ ಉಪಸ್ಥಿತರಿದ್ದರು.

ಸ್ವಂತ ನಿವೇಶನ ಅಗತ್ಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಅವರು ಜಿಲ್ಲೆಯಲ್ಲಿನ 83 ಅಂಗನವಾಡಿಗಳಿಗೆ ಸ್ವಂತ ನಿವೇಶನದ ಅವಶ್ಯಕತೆಯಿದ್ದು, ಇದರಲ್ಲಿ 30 ಅಂಗನವಾಡಿಗಳಿಗೆ ನಿವೇಶನ ಗುರುತಿಸಿದ್ದು, ಬಾಕಿ ಉಳಿದಿರುವ 53 ಅಂಗನವಾಡಿಗಳಿಗೆ ಜಾಗದ ಅವಶ್ಯಕತೆ ಇರುವುದಾಗಿ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧೆಡೆ ತೋಟಗಾರಿಕೆ ಇಲಾಖೆಗೆ ಜಾಗವನ್ನು ಗುರುತಿಸಿ ಸರ್ವೆ ನಡೆಸಿ ಹಾಗೂ ಭಾಗಮಂಡಲದಲ್ಲಿ ಕೃಷಿ ಇಲಾಖೆಗೆ ಅವಶ್ಯವಿರುವ ಜಾಗವನ್ನು ಕೃಷಿ ಇಲಾಖೆಯ ಹೆಸರಿಗೆ ಅರ್‌ಟಿಸಿ ಮಂಜೂರು ಮಾಡಲು ಅಧಿ ಕಾರಿಗಳಿಗೆ ಸೂಚನೆ ನೀಡಿದರು.ವಿರಾಜಪೇಟೆ ನ್ಯಾಯಾಲಯಕ್ಕೆ ಮಂಜೂರಾಗಿರುವ ಜಾಗವನ್ನು ಆರ್‌ಟಿಸಿಯಲ್ಲಿ ನೋಂದಾಯಿಸಿ ಹಸ್ತಾಂತರಿ ಸಲು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next