Advertisement

ಒಂದೇ ಸೂರಿನಡಿ ವಸತಿ ಯೋಜನೆಗಳು ಲಭ್ಯ

10:50 PM Jan 13, 2020 | Lakshmi GovindaRaj |

ಬೆಂಗಳೂರು: ವಿವಿಧ ಹೆಸರಿನಲ್ಲಿರುವ ವಸತಿ ಯೋಜನೆಗಳನ್ನು ಒಂದೇ ಸೂರಿನಡಿ ತರಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ಸಭೆಯ ನಂತರ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಅರ್ಹರಿಗೆ ಮನೆ ದೊರಕಿಸಿಕೊಡುವ ಉದ್ದೇಶದಿಂದ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.

Advertisement

ಸೂರಿಲ್ಲದ ಬಡವರಿಗೆ ಮನೆ ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಈಗಾಗಲೇ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಐದಾರು ತಿಂಗಳಲ್ಲಿ ವಸತಿ ಇಲಾಖೆಗೆ ಕಾಯಕಲ್ಪ ಕಲ್ಪಿಸಲಾಗುವುದು. ಅದಕ್ಕಾಗಿ ಸಂಪುಟ ಉಪ ಸಮಿತಿಯಲ್ಲಿ ಸುದೀರ್ಘ‌ ಚರ್ಚೆ ನಡೆಸಲಾಗುತ್ತಿದೆ.

ಪ್ರತಿ ಫ‌ಲಾನುಭವಿಗೆ ಆಧಾರ ಮತ್ತು ರೇಷನ್‌ ಕಾರ್ಡ್‌ ಲಿಂಕ್‌ ಮಾಡುವ ಮೂಲಕ ಅಕ್ರಮಕ್ಕೆ ತಡೆಯೊಡ್ಡಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮೊದಲ ಕಂತಿನ ಒಂದು ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಕಂದಾಯ ಇಲಾಖೆಯಿಂದ ವರದಿ ಬಂದ ನಂತರ ಎರಡನೇ ಕಂತಿನ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next