ಹೊಸದಿಲ್ಲಿ: ಮುಂದಿನ ವರ್ಷದ ಬಜೆಟ್‌ನಲ್ಲಿ ಕೈಗೆಟಕುವ ದರದಲ್ಲಿ ಗೃಹ ನಿರ್ಮಾಣ ಕ್ಷೇತ್ರಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ನೀಡಬೇಕು ಎಂಬ ಬಗ್ಗೆ ಒತ್ತಾಯಗಳು ಇವೆ.
ಸೋಂಕಿನ ಹೊಡೆತದಿಂದಾಗಿ ತತ್ತರಿಸಿರುವ ರಿಯಲ್ ಎಸ್ಟೇಟ್ ಮತ್ತು ಸ್ವಂತ ಸೂರು ಹೊಂದಬೇಕು ಎಂದು ಬಯಸುವವರಿಗೆ ಅನುಕೂಲವಾಗುವಂಥ ಕ್ರಮಗಳನ್ನು ಪ್ರಕಟಿಸಬೇಕು ಎಂದು ವೇತನದಾರರು ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದವರಿಂದ ಬೇಡಿಕೆ ವ್ಯಕ್ತವಾಗಿದೆ.
ಗೃಹ ಸಾಲದ ಮೇಲೆ ಇರುವ ತೆರಿಗೆ ರಿಯಾಯಿತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ವೇತನದಾರರ ಬೇಡಿಕೆ ಇದೆ. ಈ ಅಂಶಗಳಿಗೆ ಪೂರಕವಾಗಿ ಕೇಂದ್ರ ಸರಕಾರ ಗೃಹ ನಿರ್ಮಾಣ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಶೇ.15-ಶೇ.20ರಷ್ಟು ಹೆಚ್ಚಿನ ಪ್ರಮಾಣದಲ್ಲಿ ವಿತ್ತೀಯ ನೆರವು ನೀಡುವ ಬಗ್ಗೆ ಚಿಂತನೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಇರಾಕ್: 11 ಯೋಧರನ್ನು ಕೊಂದ ಐಎಸ್ ನ ಉಗ್ರರು
ಇದರ ಜತೆಗೆ ವಿದೇಶಗಳಲ್ಲಿ ಶಿಕ್ಷಣ ಪಡೆಯುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ವಿತ್ತೀಯ ನೆರವು ನೀಡುವ ಬಗ್ಗೆಯೂ ಶಿಕ್ಷಣ ಕ್ಷೇತ್ರದಿಂದ ಬೇಡಿಕೆ ವ್ಯಕ್ತವಾಗಿದೆ.