Advertisement
ಗಾಳಿಯ ಹಾಗೆ ನೀರು ಅಷ್ಟೇ ಅಮೂಲ್ಯವಾದುದು. ನೀರಿಗಾಗಿಯೂ ಎಷ್ಟೋ ಕಡೆ ಹಾಹಾಕಾರವಿದೆ. ಬೇಸಗೆ ಕಾಲದಲ್ಲಿ ನೀರಿಲ್ಲದೆ ಕಷ್ಟ ಪಡುವ ಊರುಗಳೂ ಇವೆ. ನೀರಿನ್ನು ಮಿತ ಬಳಕೆ ಮಾಡಲು ಆರಂಭಿಸಿದರೆ ಮುಂದೆ ಆಗುವ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಬಹುದು. ಅದರೊಂದಿಗೆ ಮಳೆಕೊಯ್ಲು, ಇಂಗುಗುಂಡಿ ಮುಂತಾದವುಗಳನ್ನು ನಾವು ಮಾಡಲು ಆರಂಭಿಸಿದರೆ ನಮ್ಮಲ್ಲಿ ನೀರಿನ ಸಮಸ್ಯೆ ಕಾಡಲಿಕ್ಕಿಲ್ಲ.
Advertisement
ಇವರು ತಮ್ಮ ಎರಡು ವರ್ಷಗಳ ಅವಧಿಯಲ್ಲಿ 887 ಕೊಳಗಳನ್ನು ನಿರ್ಮಿಸಿದ್ದಾರೆ. ಪ್ರತೀ ಕೊಳವು 10 ಸಾವಿರದಿಂದ 2,50,000 ಲೀ. ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ. ಮಳೆಗಾಲದಲ್ಲಿ ಮಳೆ ನೀರು ಇದರಲ್ಲಿ ಶೇಖರಣೆಯಾಗಿ ನೀರಿನ ಸಮಸ್ಯೆ ನೀಗುವುದರ ಜತೆಗೆ ಮಣ್ಣಿನ ತೇವಾಂಶವನ್ನು ಹೆಚ್ಚಿಸುತ್ತದೆ. ಕೊಳ ನಿರ್ಮಿಸುವುದಕ್ಕೆ ಜಾಗ ಆಯ್ದುಕೊಳ್ಳವುದೇ ಇವರಿಗೆ ಬಹುದೊಡ್ಡ ಸಮಸ್ಯೆಯಾಗಿತ್ತು. ಇಳಿಜಾರು ಪ್ರದೇಶದ ತಳಭಾಗದಲ್ಲಿ ಈ ಕೊಳಗಳನ್ನು ನಿರ್ಮಿಸಲು ಹೆಚ್ಚು ಆದ್ಯತೆ ನೀಡಿದರು. ಇವುಗಳ ನಿರ್ಮಾಣದಿಂದಾಗಿ ನೀರಿನ ಸಮಸ್ಯೆ, ಕಾಡ್ಗಿಚ್ಚು ಸಮಸ್ಯೆಗಳು ಕಡಿಮೆಯಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಾಗಲು ಕಾರಣವಾಯಿತು. ಸದ್ಯ ಇಲ್ಲಿ 70 ನೀರು ಸರಬರಾಜು ಯೋಜನೆಗಳಿವೆ. ಕೆಲವೇ ವರ್ಷಗಳಲ್ಲಿ ರುದ್ರಪ್ರಯಾಗ್ ನೀರಿನ ಸಮಸ್ಯೆಯೇ ಕಾಡದಷ್ಟು ಬದಲಾಗಿದೆ. ಹಚ್ಚಹಸುರಿನಿಂದ ಕಂಗೊಳಿಸುತ್ತಿದೆ.
ಅಂತಹ ಬರಡು ಭೂಮಿಯಲ್ಲೇ ಸಮೃದ್ಧ ನೀರು ಹರಿದಾಡುವಂತೆ, ಮಣ್ಣಿನಲ್ಲಿ ತೇವಾಂಶ ಹೆಚ್ಚಾಗುವಂತೆ ಮಾಡಲು ಸಾಧ್ಯವಾದರೆ ನಮಗೂ ಸಾಧ್ಯವಲ್ಲವೇ? ನಾವು ಪ್ರಯತ್ನ ಪಟ್ಟರೆ ನಮ್ಮ ಊರು ಕೂಡ ನೀರಿನ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು. ಇದರಿಂದಾಗಿ ಪ್ರಕೃತಿಯ ಒಳಿತೂ ಸಾಧ್ಯ. ಪ್ರಕೃತಿಯಿಂದಲೇ ಎಲ್ಲ ಪಡೆಯುವ ನಾವು ಪ್ರಕೃತಿಗೂ ಒಂದಿಷ್ಟು ಕೊಡುಗೆ ನಿಡೋಣ…
ರಂಜಿನಿ