Advertisement
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಈಗ ಒಬ್ಬರಿಗೊಬ್ಬರು ಬುಡ ಕುಯ್ದುಕೊಳ್ಳುವ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ರಸ್ತೆಯಲ್ಲಿ ನಿಂತುಕೊಂಡು ಹೊಡೆದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಬರುವ ದಿನಗಳಲ್ಲಿ ಇನ್ನೂ ಏನೇನು ಆಗುತ್ತೆ. ಇದರ ಜತೆಗೆ ಮೂರು ಡಿಸಿಎಂ ಚರ್ಚೆ ನಡೆಯುತ್ತಿದೆ. ಡಿ.ಕೆ. ಶಿವಕುಮಾರ್ ಬಲಿಯಾಗಬೇಕೆಂದು ಸಚಿವರ ಮೂಲಕ ಸಿದ್ದರಾಮಯ್ಯನವರೇ ಹೆಚ್ಚುವರಿ ಡಿಸಿಎಂ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಟೀಕಿಸಿದರು.
ಬೆಲೆ ಏರಿಕೆ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಉಡಾಫೆ ಉತ್ತರ ಕೊಡುತ್ತಾರೆ. ರಾಜ್ಯದ ಜನರ ಸಮಸ್ಯೆ ಮತ್ತು ಅಭಿವೃದ್ಧಿ ಬಗ್ಗೆ ಮಾತ್ರ ಯಾರೂ ಮಾತನಾಡುತ್ತಿಲ್ಲ. ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಮುಂದೆ ಇನ್ನು ಹೋರಾಟದ ದಿನಗಳು ಮಾತ್ರ ಉಳಿದಿವೆ. ಮುಂದೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಸರಕಾರಕ್ಕೆ ಕೋರ್ಟ್ ಛೀಮಾರಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿರಬಹುದು. ಆದರೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿ¨ªಾರೆ. ಎಸ್‌ಐಟಿ ಮಾಜಿ ಮಂತ್ರಿಗೆ ನೋಟಿಸ್ ಕೊಟ್ಟು ತನಿಖೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೋರ್ಟ್ ಕೂಡ ಸರಕಾರಕ್ಕೆ ಛೀಮಾರಿ ಹಾಕಿದೆ ಎಂದರು.
Related Articles
ಅಭ್ಯರ್ಥಿಗಳ ಅಂತಿಮ ಆಯ್ಕೆ
ಚನ್ನಪಟ್ಟಣದಿಂದ ತಮ್ಮ ಕುಟುಂಬದವರ ಸ್ಪರ್ಧೆ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ನಮಗೆ ಮುಖ್ಯ ಅಲ್ಲ. ಯಾರೇ ಅಭ್ಯರ್ಥಿಯಾದರೂ ಜೆಡಿಎಸ್ ನಾವು ಒಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಯಾವ ಫಲಿತಾಂಶ ಬಂದಿದೆ ಎಂದು ಗೊತ್ತಿದೆ.
Advertisement
ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಗ್ಗೆ ನಾವು ಶೀಘ್ರದಲ್ಲೇ ಕೋರ್ ಕಮಿಟಿ ಸಭೆ ಕರೆದು ಚರ್ಚೆ ನಡೆಸುತ್ತೇವೆ. ಅಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಸರಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ. ಹಾಲಿನ ಬೆಲೆ ಏರಿಕೆ ವಿರುದ್ಧವೂ ಹೋರಾಟ ನಡೆಸುತ್ತೇವೆ ಎಂದರು.