Advertisement

‘ವಿಕ್ರಾಂತ್ ರೋಣ’ ಹಾಡಿಗೆ ಜಾಕ್ವೆಲಿನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?  

03:11 PM Jul 08, 2021 | Team Udayavani |

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುಭಾಷಾ ಸಿನಿಮಾ ವಿಕ್ರಾಂತ್ ರೋಣದ ಹಾಡೊಂದಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಡೀಸ್‍ರವರು ಹೆಜ್ಜೆ ಹಾಕಲಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಸದ್ಯ ಲೆಟೆಸ್ಟ್ ಮ್ಯಾಟರ್ ಏನಪ್ಪಾ ಅಂದ್ರೆ ಈ ಹಾಡಿಗಾಗಿ ಈ ನಟಿ ಪಡೆಯುತ್ತಿರುವ ಸಂಭಾವನೆ ಎಷ್ಟು ಎಂಬುದು ರಿವೀಲ್ ಆಗಿದೆ.

Advertisement

ಬಹು ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತ್ರಿಡಿ ಟೆಕ್ನಾಲಜಿಯಲ್ಲಿ ತೆರೆ ಮೇಲೆ ಬರಲಿದೆ. ಸದ್ಯ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಹಲವು ವಿಶೇಷಗಳೊಂದಿಗೆ ಮೂಡಿಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಹಾಡೊಂದಕ್ಕೆ ಫರ್ನಾಡೀಸ್ ನೃತ್ಯ ಮಾಡಲಿದ್ದಾರೆ. ಸಿನಿಮಾದಲ್ಲಿ ಬರುವ ಕೇವಲ 5 ನಿಮಿಷದ ಹಾಡಿಗೆ ಡ್ಯಾನ್ಸ್ ಮಾಡಲು ಗ್ರೀನ್ ಸಿಗ್ನಲ್ ನೀಡುವ ಜಾಕ್ವೆಲಿನ್, ಇದಕ್ಕಾಗಿ ಬರೋಬ್ಬರಿ 3 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಮೇ ತಿಂಗಳಿನಲ್ಲಿಯೇ ನಡೆಯಬೇಕಾಗಿದ್ದ ಹಾಡಿನ ಶೂಟಿಂಗ್, ಕೊರೊನಾ ಲಾಕ್‍ಡೌನ್‍ನಿಂದಾಗಿ ಇದೀಗ ಅದ್ದೂರಿಯಾಗಿ ಬೆಂಗಳೂರಿನಲ್ಲಿ ಹಾಡನ್ನು ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಹಾಡಿಗೆ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

ಈ ವರ್ಷದಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಲಿದೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ವಿಕ್ರಾಂತ್ ರೋಣ ತೆರೆ ಕಾಣಲಿದೆ.

Advertisement

Udayavani is now on Telegram. Click here to join our channel and stay updated with the latest news.

Next