Advertisement

ಸಚಿವ ರವಿ ಎಷ್ಟು ಗ್ರಾಮ ದತ್ತು ಪಡೆದಿದ್ದಾರೆ?: ಸಿದ್ದು

11:27 PM Sep 20, 2019 | Lakshmi GovindaRaju |

ಚಿಕ್ಕಮಗಳೂರು: ಕಾಂಗ್ರೆಸ್ಸಿಗರು ಗ್ರಾಮಗಳನ್ನು ದತ್ತು ತೆಗೆದುಕೊಳ್ಳಲಿ ಎಂದಿರುವ ಸಚಿವ ಸಿ.ಟಿ.ರವಿ ಎಷ್ಟು ಗ್ರಾಮಗಳನ್ನು ದತ್ತು ತೆಗೆದುಕೊಂಡಿದ್ದಾರೆ ಎಂಬುದನ್ನು ಮೊದಲು ತಿಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

Advertisement

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ರವಿ ಕಾಂಗ್ರೆಸ್ಸಿಗರು ಅತಿವೃಷ್ಟಿ ಸಂತ್ರಸ್ತರ ಪರವಾಗಿ ಟ್ವೀಟ್‌ ಮೂಲಕ ಹೋರಾಡುವ ಬದಲು ಗ್ರಾಮಗಳನ್ನು ದತ್ತು ಪಡೆಯಲಿ ಎಂದಿದ್ದಾರೆ. ಮೊದಲು ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟು ಗ್ರಾಮಗಳನ್ನು ದತ್ತು ಪಡೆದಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.

ಸಿದ್ದರಾಮಯ್ಯ ಅವರಿಗೆ ಮುಂದೆ ಉತ್ತಮ ಭವಿಷ್ಯವಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸ್ವಾಮೀಜಿಯವರು ಈ ರೀತಿ ಹೇಳಿದಾಗ ನಾನು ಪಕ್ಕದಲ್ಲಿಯೇ ಇದ್ದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಜನಾಶೀರ್ವಾದ ಮುಖ್ಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next