Advertisement

ಕನ್ನಡಪರ ಹೋರಾಟಗಾರರನ್ನು ಜೈಲಿಗೆ ಹಾಕಿದ್ದು ಎಷ್ಟು ಸರಿ?: ಕೋಟ

09:20 PM Feb 15, 2024 | Team Udayavani |

ಬೆಂಗಳೂರು: ಮಾತೆತ್ತಿದರೆ ನಾವು ಕನ್ನಡಪರ ಎನ್ನುವ ಸರ್ಕಾರ ಕನ್ನಡಪರ ಹೋರಾಟಗಾರರನ್ನು ಜೈಲಿಗೆ ಹಾಕಿದ್ದು ಎಷ್ಟು ಸರಿ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್‌ ಪೂಜಾರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Advertisement

ರಾಜ್ಯಪಾಲರ ಭಾಷಣದ ವಂದನಾ ಪ್ರಸ್ತಾಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಸರ್ಕಾರ ಕನ್ನಡಪರ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕನ್ನಡದ ಬಗ್ಗೆ ಹೋರಾಟ ನಡೆಸಿದವರನ್ನು ಜೈಲಿಗೆ ಹಾಕಿದೆ. ಜೊತೆ ಜಾಮೀನು ಸಿಗದ ರೀತಿಯಲ್ಲಿ ಮಾಡಿದ್ದೇವೆೆ. ಕನ್ನಡ ಹೋರಾಟಗಾರರನ್ನು ಜೈಲಿಗೆ ಕಳುಹಿಸಿ ಇತ್ತ ಕನ್ನಡ ಉಳಿಸುತ್ತೇವೆ ಎಂದರೆ ಹೇಗೆ ಎಂದು ಕೆಣಕಿದರು.
ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಸ್ವಾಗತಾರ್ಹ ಆದರೆ. ಸದನ ಹತ್ತಿರವಿರುವಾಗ ಆ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್‌ ಕಳಿಸಿದ್ದಾರೆ. ಆದರೆ ಈ ವಿಚಾರದಲ್ಲಿ ರಾಜ್ಯಪಾಲರನ್ನೇ ತಪ್ಪಿತಸ್ಥರನ್ನಾಗಿ ಮಾಡುವ ಕೆಲಸವನ್ನು ಸರ್ಕಾರ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೀವು ಸದನದ ಮೂಲಕ ಜನತೆ ತಪ್ಪು ಸಂದೇಶ ನೀಡಬೇಡಿ ಎಂದರು.

ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಕುರಿತ ಸುಗ್ರೀವಾಜ್ಞೆಯನ್ನು ಜನವರಿ ಮೊದಲ ವಾರದಲ್ಲೇ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ ಆರೋಗ್ಯ ಕಾರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಆ ಬಗ್ಗೆ ಗಮನ ಹರಿಸಲಿಲ್ಲ. ಇದು ಸರ್ಕಾರದ ಗಮನಕ್ಕೂ ಇದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾಗಿ ನಾನು ಇಲ್ಲೂ ಈ ಬಗ್ಗೆ ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿಲ್ಲ. ಮಾಧ್ಯಮಗಳ ರೆಕಾರ್ಡ್‌ ತೆಗಿಸಿ ನೋಡಿ ಎಂದು ತೀಕ್ಷ್ಣವಗಿ ಪ್ರತಿಕ್ರಿಯಿಸಿದರು. ಮಧ್ಯಪ್ರವೇಶ ಮಾಡಿದ ಜೆಡಿಎಸ್‌ನ ಭೋಜೆಗೌಡ ಕನ್ನಡ ಶಾಲೆಗಳ ಬಗ್ಗೆ ಸರ್ಕಾರ ಗಮನಹರಿಸಲಿ ಎಂದು ಒತ್ತಾಯಿಸಿದರು. ಸಭಾಪತಿಗಳ ಮಧ್ಯಪ್ರವೇಶದಿಂದ ಸದನ ಸರಿದಾರಿಗೆ ಬಂತು.

Advertisement

Udayavani is now on Telegram. Click here to join our channel and stay updated with the latest news.

Next