Advertisement
9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ 20,000 ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯ 8ನೇ ಕಂತಿನಲ್ಲಿ ಬಿಡುಗಡೆ ಮಾಡಲಾಗಿದೆ.
Related Articles
Advertisement
ಆಧಾರ್ ಸಂಖ್ಯೆ, ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆಗಳ ಮೂಲಕ ಫಲಾನುಭವಿಗಳು ಕ್ರೆಡಿಟ್ ವಿವರಗಳನ್ನು ಪರಿಶೀಲಿಸಬಹುದಾಗಿದೆ. ನಿಮ್ಮ ಅಪೇಕ್ಷಿತ ಪಟ್ಟಿಯಲ್ಲಿ ಪಂಚ್ ಮಾಡಿ ಮತ್ತು ಎಂಟ್ರಿ ಮೇಲೆ ಕ್ಲಿಕ್ಮಾಡಿ. ಈಗ, ನೀವು ನಿಮ್ಮ ವಿವರಗಳನ್ನು ಪರಿಶೀಲಿಸಬಹುದು.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯು ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿ ಯೋಗ್ಯ ಭೂಮಿಯನ್ನು ಹೊಂದಿರುವ ದೇಶಾದ್ಯಂತದ ಎಲ್ಲಾ ಭೂಹಿಡುವಳಿದಾರ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ವರದಿ ತಿಳಿಸಿದೆ.
ಇನ್ನು, ಒಂದು ವರ್ಷದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಕಂತನ್ನು ಏಪ್ರಿಲ್-ಜುಲೈ ವರೆಗೆ ಅವಧಿ 1 ರ ಮೂಲಕ ಮೂರು ಬಾರಿ ಹಣಬಿಡುಗಡೆ ಮಾಡಲಾಗುತ್ತದೆ. ಅವಧಿ 2 ಆಗಸ್ಟ್ ನಿಂದ ನವೆಂಬರ್ ವರೆಗೆ ಹಾಗೂ ಅವಧಿ 3 ಡಿಸೆಂಬರ್ ನಿಂದ ಮಾರ್ಚ್ ವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.
ಇದನ್ನೂ ಓದಿ : ಅನುದಾನರಹಿತ ಶಾಲೆ ಶಿಕ್ಷಕ-ಶಿಕ್ಷಕೇತರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿಎಂ ಗೆ ಸಚಿವರ ಪತ್ರ