Advertisement

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

11:22 AM May 22, 2024 | Team Udayavani |

ಬೆಂಗಳೂರು: ಹೊಯ್ಸಳ ಪೊಲೀಸರನ್ನೇ ಸಾರ್ವಜನಿಕರೇ ಕಳ್ಳ ಕಳ್ಳ ಎಂದು ಅಟ್ಟಾಡಿಸಿಕೊಂಡು ಹೋಗಿರುವ ಪ್ರಸಂಗ ನಗರದಲ್ಲಿ ನಡೆದಿದೆ. ಮೇ 17 ರಂದು ರಾಜಗೋಪಾಲನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪೀಣ್ಯ 2 ನೇ ಹಂತದಲ್ಲಿ ಈ ಘಟನೆ ನಡೆದಿದೆ.

Advertisement

ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ರಾತ್ರಿ ವೇಳೆ ಜನರಿಂದ ಮಾಮೂಲಿ ಹಣ ವಸೂಲಿ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಅದೇ ವೇಳೆ ಆಟೋದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹೊಯ್ಸಳ ಪೊಲೀಸರನ್ನು ಪ್ರಶ್ನಿಸಲು ಮುಂದಾಗಿದ್ದಾರೆ. ಆಗ ಗಾಬರಿಗೊಂಡ ಪೊಲೀಸರು ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಅದನ್ನು ಹಿಂಬಾಸಿದ ಇಬ್ಬರು ವ್ಯಕ್ತಿಗಳು ಹಾಗೂ ಕೆಲ ಸಾರ್ವಜನಿಕರು ಮೊಬೈಲ್‌ ನಲ್ಲಿ ಸೆರೆ ಹಿಡಿದಿದ್ದಾರೆ.

ಈ ದೃಶ್ಯ ಸಾಮಾಜಿಕ ಜಾಲತಾನದಲ್ಲಿ ವೈರಲ್‌ ಆಗುತ್ತಿದ್ದಂತೆ ಚರ್ಚೆ ಆಗುತ್ತಿದಂತೆ ಎಚ್ಚೆತ್ತುಕೊಂಡಿರುವ ಹಿರಿಯ ಪೊಲೀಸ್‌ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡದಿದ್ದರೆ ಪೊಲೀಸರು ಧೈರ್ಯವಾಗಿ ನಿಂತು ಸಾರ್ವಜನಿಕರನ್ನು ಪ್ರಶ್ನಿಸುತ್ತಿದ್ದರು. ತಪ್ಪು ಮಾಡಿರುವುದರಿಂದಲೇ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next