ಹೊಸದಿಲ್ಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವುದಕ್ಕಾಗಿ 9ರಿಂದ 14 ವಯೋಮಾನದ ಬಾಲಕಿಯರಿಗೆ ಎಚ್‌ಪಿವಿ ಲಸಿಕೆ ನೀಡುವುದನ್ನು ರಾಷ್ಟ್ರೀಯ ಲಸಿಕೆ ಕಾರ್ಯಕ್ರದಲ್ಲಿ ಸೇರಿಸಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಇದಕ್ಕೆ ಪೂರಕವಾಗಿ ಇದೇ ಎಪ್ರಿಲ್‌ನಲ್ಲಿ ಜಾಗತಿಕ ಟೆಂಡರ್ ಕರೆಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
Advertisement
ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ದೇಶೀಯ ವಾಗಿ ತಯಾರಿಸಿರುವ ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಸರ್ವವ್ಯಾಕ್ ಲಸಿಕೆಯನ್ನು ಇತ್ತೀಚೆಗೆ, ಜ. 24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆಗೊಳಿಸಿದ್ದರು.